ದೇಶ

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್ ಡಿಎ 200ಕ್ಕೂ ಹೆಚ್ಚು ಸೀಟು ಗೆಲ್ಲಲಿದೆ: ನಿತೀಶ್ ಕುಮಾರ್

ಮುಂದಿನ ವರ್ಷ ನಡೆಯುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್ ಡಿಎ 200 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್ ಡಿಎ 200ಕ್ಕೂ ಹೆಚ್ಚು ಸೀಟು ಗೆಲ್ಲಲಿದೆ: ನಿತೀಶ್ ಕುಮಾರ್
ನಿತೀಶ್ ಕುಮಾರ್
Published On :

ಪಾಟ್ನಾ: ಮುಂದಿನ ವರ್ಷ ನಡೆಯುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್ ಡಿಎ 200 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

ಜೆಡಿಯು ಕೌನ್ಸಿಲ್ ಸಭೆಯಲ್ಲಿ ಮಾತನಾಡಿದ ನಿತೀಶ್ ಕುಮಾರ್, ನನ್ನ ರಾಜಕೀಯ  ವಿರೋಧಿಗಳು ನನಗೆ ಚತುರಮತಿ ಇಲ್ಲ ಎಂದು ಲೇವಡಿ ಮಾಡುತ್ತಾರೆ. ಅವರು ಸಾರ್ವಜನಿಕವಾಗಿ ವಯಕ್ತಿಕ ವಿಷಯಗಳ ಬಗ್ಗೆ ವಾಗ್ದಾಳಿ ನಡೆಸುತ್ತಾರೆ ಎಂದು ಆರೋಪಿಸಿದ್ದಾರೆ.

ನನ್ನ ಮೇಲೆ ಯಾರಾದರೂ ಅಪನಿಂದೆ ಮಾಡಿದರೇ ಪಕ್ಷದ ಯಾವುದೇ ಕಾರ್ಯಕರ್ತರು ಕಠಿಣವಾಗಿ ಪ್ರತಿಕ್ರಿಯಿಸುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ. ಇಂಥಹ ವಿಷಯಗಳಿಗೆ ಹೆಚ್ಚು ಆದ್ಯತೆ ನೀಡಬಾರದು ಅದನ್ನು ಎಳೆಯಬಾರದು ಎಂದು ಪಕ್ಷದ ವಕ್ತಾರರಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

2010ರ ವಿಧಾನಸಭೆ ಚುನಾವಣೆಯನ್ನು ಸ್ಮರಿಸಿದ  ನಿತೀಶ್, ನಮಗೆ ಬಹುಮತ ಸಿಗುವುದಿಲ್ಲ ಎಂದು ಹಲವರು ಅನುಮಾನ ವ್ಯಕ್ತ ಪಡಿಸಿದ್ದಾರೆ, 243 ರಲ್ಲಿ ನಾವು 206 ಸೀಟುಗಳಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.