ವಿಶ್ವಸಂಸ್ಥೆ ಸಾಮಾನ್ಯಸಭೆ 74ನೇ ಅಧಿವೇಶನ: 75 ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ಮೋದಿ ಮಾತುಕತೆ
ಮುಂದಿನ ವಾರ ವಿಶ್ವಸಂಸ್ಥೆ ಸಾಮಾನ್ಯ ಸಭೆಯ 74ನೇ ಅಧಿವೇಶನ ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ವಿಶ್ವ ಸಂಸ್ಥೆ ಭೇಟಿಯಿಂದಾಗಿ ಸದೃಢ, ಸ್ಪಷ್ಪ ಹಾಗೂ ಕ್ರಿಯಾ ಶೀಲ ಆಧಾರಿತ ಪರಿಣಾಮ ಹೊರಹೊಮ್ಮಲಿದೆ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯಂ ಪ್ರತಿನಿಧಿ ಸಯ್ಯದ್ ಅಕ್ಬರುದ್ದೀನ್ ಹೇಳಿದ್ದಾರೆ.

ನವದೆಹಲಿ: ಮುಂದಿನ ವಾರ ವಿಶ್ವಸಂಸ್ಥೆ ಸಾಮಾನ್ಯ ಸಭೆಯ 74ನೇ ಅಧಿವೇಶನ ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ವಿಶ್ವ ಸಂಸ್ಥೆ ಭೇಟಿಯಿಂದಾಗಿ ಸದೃಢ, ಸ್ಪಷ್ಪ ಹಾಗೂ ಕ್ರಿಯಾ ಶೀಲ ಆಧಾರಿತ ಪರಿಣಾಮ ಹೊರಹೊಮ್ಮಲಿದೆ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯಂ ಪ್ರತಿನಿಧಿ ಸಯ್ಯದ್ ಅಕ್ಬರುದ್ದೀನ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಒಟ್ಟಾರೇ 75 ರಾಷ್ಟ್ರಗಳ ಮುಖ್ಯಸ್ಥರು ಹಾಗೂ ವಿದೇಶಾಂಗ ಸಚಿವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ. ಮುರಳೀಧರನ್ ವಿವಿಧ ವೇದಿಕೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅಥವಾ ವಿದೇಶಾಂಗ ವ್ಯವಹಾರಗಳ ಸಚಿವರುಗಳು ಹಾಗೂ ಅವರ ಪ್ರತಿನಿಧಿಗಳು ಈ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದು, ಪ್ರಮುಖ ಸಮಸ್ಯೆಗಳ ಬಗ್ಗೆ 30 ನಿಮಿಷಗಳ ಕಾಲ ಚರ್ಚೆ ನಡೆಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಸೆಪ್ಟೆಂಬರ್ 23ರಿಂದ ಆರಂಭವಾಗಿ ಸೆಪ್ಟೆಂಬರ್ 27ರವರೆಗೂ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯಸಭೆಯ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಐದು ವರ್ಷಗಳಲ್ಲಿ ಮೊದಲ ಬಾರಿಗೆ ಭಾಷಣ ಮಾಡಲಿದ್ದು, ದ್ವಿಪಕ್ಷೀಯ ಸಂಬಂಧ ವೃದ್ದಿಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


