ಮಾಜಿ ಸಂಸದ, ಟಿಡಿಪಿ ಮುಖಂಡ ಎನ್ ಶಿವ ಪ್ರಸಾದ್ ನಿಧನ
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಟಿಡಿಪಿ ಹಿರಿಯ ನಾಯಕ ಹಾಗೂ ಮಾಜಿ ಸಂಸದ ಎನ್ ಶಿವ ಪ್ರಸಾದ್ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ವಿಜಯವಾಡ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಟಿಡಿಪಿ ಹಿರಿಯ ನಾಯಕ ಹಾಗೂ ಮಾಜಿ ಸಂಸದ ಎನ್ ಶಿವ ಪ್ರಸಾದ್ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
68 ವರ್ಷದ ಶಿವ ಪ್ರಸಾದ್ ಅವರು ಕಿಡ್ನಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು.
ಆಂಧ್ರ ಪ್ರದೇಶದ ಚಿತ್ತೂರ್ ಜಿಲ್ಲೆಯ ಪೊಟ್ಟಿಪಲ್ಲೇ ಗ್ರಾಮದವರಾದ ಶಿವ ಪ್ರಸಾದ್ ಅವರು ರಾಜಕೀಯಕ್ಕೆ ಬರುವ ಮುನ್ನ ಹಲವು ನಾಟಕ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಲ್ಲದೆ ತುಲಸಿ, ಪ್ರೇಮ, ತಪಸ್ಸು, ಟೋರಿ ರಾಜ ಸ್ವೀಟಿ ರೋಜಾ ಮತ್ತು ಇಲ್ಲಲು ಸೇರಿದಂತೆ ಹಲವು ಚಿತ್ರಗಳ ನಿರ್ದೇಶನವನ್ನು ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


