ವಿಶ್ವ ಕರ್ಮ ಸಮುದಾಯಕ್ಕೆ ಬಿಜೆಪಿ ವಂಚನೆ- ಅಖಿಲೇಶ್ ಯಾದವ್ ಆರೋಪ
ವಿಶ್ವಕರ್ಮ ಸಮುದಾಯವನ್ನು ಬಿಜೆಪಿ ವಂಚಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಗಂಭೀರ ಆರೋಪ ಮಾಡಿದ್ದಾರೆ.

ಲಖನೌ: ವಿಶ್ವಕರ್ಮ ಸಮುದಾಯವನ್ನು ಬಿಜೆಪಿ ವಂಚಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಗಂಭೀರ ಆರೋಪ ಮಾಡಿದ್ದಾರೆ.
2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಗೋಮತಿ ನದಿ ದಂಡೆ ಮೇಲೆ ವಿಶ್ವಕರ್ಮ ದೇವಾಲಯವನ್ನು ಸ್ಥಾಪನೆ ಮಾಡುವುದಾಗಿ ಹೇಳುವ ಮೂಲಕ ಆ ಸಮುದಾಯವನ್ನು ಹಾದಿ ತಪ್ಪಿಸುತ್ತಿದೆ ಎಂದು ಟೀಕಿಸಿದ್ದಾರೆ.
ಒಂದು ವೇಳೆ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ವಿಶ್ವಕರ್ಮ ಜಯಂತಿ ದಿನದಂದು ಸಾರ್ವತ್ರಿಕ ರಜೆಯನ್ನು ಪುನರ್ ಆರಂಭಿಸಲಾಗುವುದು ಎಂದು ತಿಳಿಸಿದರು.
ವಿಶ್ವಕರ್ಮ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಮುದಾಯಕ್ಕೆ ಆರ್ಹತೆ ಇದ್ದರೂ ಗೌರವ ನೀಡದೆ ಬಿಜೆಪಿ ಅಪಮಾನಿಸುತ್ತಿದೆ. ವಿಶ್ವಕರ್ಮ ಸಮುದಾಯ ಎಸ್ ಪಿಗೆ ಬೆಂಬಲ ನೀಡಿದರೆ ಉತ್ತರ ಪ್ರದೇಶದಲ್ಲಿ ಸರ್ಕಾರ ರಚನೆ ಮಾಡುವುದಾಗಿ ಹೇಳಿದರು.
ವಿಶ್ವಕರ್ಮ ಸಮುದಾಯದ ವಿದ್ಯಾರ್ಥಿಗಳಿಗೆ ಆದ್ಯತೆಯ ಮೇರೆಗೆ ಲ್ಯಾಪ್ ಟಾಪ್ ಗಳನ್ನು ವಿತರಿಸುವುದಾಗಿ ಅಖಿಲೇಶ್ ಯಾದವ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


