ಕಾಶ್ಮೀರ ಭೀಕರ ಉಗ್ರ ದಾಳಿಯ ಯೋಜನೆ ವಿಫಲಗೊಳಿಸಿದ ಸೇನೆ!
ಕಾಶ್ಮೀರದಲ್ಲಿ ಸಂಭಾವ್ಯ ಭೀಕರ ಉಗ್ರ ದಾಳಿಯ ಯೋಜನೆಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ.

ಕಾಶ್ಮೀರದಲ್ಲಿ ಸಂಭಾವ್ಯ ಭೀಕರ ಉಗ್ರ ದಾಳಿಯ ಯೋಜನೆಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ.
ಕತುವಾ ಪ್ರದೇಶದಿಂದ ಸುಮಾರು 40 ಕೆ.ಜಿ ಸ್ಫೋಟಕ ಸಾಮಗ್ರಿಗಳನ್ನು ಭಾರತೀಯ ಸೇನೆ ವಶಕ್ಕೆ ಪಡೆದಿದೆ. ದೇವಲ್ ಗ್ರಾಮದಲ್ಲಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಈ ಸಾಮಗ್ರಿಗಳು ದೊರೆತಿವೆ.
ವಶಪಡಿಸಿಕೊಳ್ಳಲಾಗಿರುವ ಸ್ಫೋಟಕ ಸಾಮಗ್ರಿಗಳನ್ನು ಸ್ಥಳೀಯವಾಗಿ ತಯಾರಿಸಲಾಗಿತ್ತು. ಇದಕ್ಕೂ ಕೆಲವೇ ಗಂಟೆಗಳ ಮುನ್ನ ಮಾತನಾಡಿದ್ದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪಾಕಿಸ್ತಾನ ಬಾಲಾಕೋಟ್ ನಲ್ಲಿ ಉಗ್ರ ನೆಲೆಗಳನ್ನು ಮರುಸ್ಥಾಪಿಸಿದ್ದು, 500 ಭಯೋತ್ಪಾದಕರು ಒಳನುಸುಳಲು ಸಿದ್ಧರಾಗಿದ್ದಾರೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


