ಭಾರತದೊಂದಿಗೆ ಯುದ್ದಕ್ಕಿಳಿದರೇ ಪಾಕಿಸ್ಥಾನ ವಿಶ್ವ ಭೂಪಟದಿಂದಲೇ ಮಾಯವಾಗಲಿದೆ: ಕಿಶನ್ ರೆಡ್ಡಿ
ಭಾರತದೊಂದಿಗೆ ಯುದ್ದ ಮಾಡುವ ಸಾಹಸ ತೋರಿಸಿದರೆ ಪಾಕಿಸ್ಥಾನ ವಿಶ್ವ ಭೂಪಟದಿಂದಲೇ ಮಾಯವಾಗಲಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿಶನ್ ರೆಡ್ಡಿ ಹೇಳಿದ್ದಾರೆ.

ಕಾಕಿನಾಡ: ಭಾರತದೊಂದಿಗೆ ಯುದ್ದ ಮಾಡುವ ಸಾಹಸ ತೋರಿಸಿದರೆ ಪಾಕಿಸ್ಥಾನ ವಿಶ್ವ ಭೂಪಟದಿಂದಲೇ ಮಾಯವಾಗಲಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿಶನ್ ರೆಡ್ಡಿ ಹೇಳಿದ್ದಾರೆ.
ಆಂಧ್ರಪ್ರದೇಶದ ಕಾಕಿನಾಡದಲ್ಲಿ ‘ಜನ್ ಜಾಗರಣ್’ ಕಾರ್ಯಕ್ರಮದಲ್ಲಿ ಮಾತನಾಡಿದ ಕಿಶನ್ ರೆಡ್ಡಿ, ಒಂದು ವೇಳೆ ಯುದ್ದ ನಡೆದರೆ ಪಾಕಿಸ್ಥಾನ ಸರ್ವನಾಶವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಸರಕಾರ ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ಎತ್ತಿ ಹಿಡಿಯುತ್ತಿದೆ. ನಮ್ಮದು ದೇಶ ಪ್ರೇಮದ ಸರ್ಕಾರ ಎಂದು ಕಿಶನ್ ರೆಡ್ಡಿ ತಿಳಿಸಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರದ ವಿಷಯದಲ್ಲಿ ಮಾತನಾಡಿದ ಅವರು ಸಮಯ ಬಂದಾಗ ಸರಿಯಾದ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.
ಜಮ್ಮು ಮತ್ತು ಕಾಶ್ಮಿರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಯಾವುದೇ ರೀತಿಯ ಗಲಭೆ ಅಥವಾ ದೊಂಬಿಗಳಾಗಿಲ್ಲ. ಇದು ಹೆಮ್ಮೆಯ ವಿಷಯ ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮಿರದಲ್ಲಿ ಆರ್ಟಿಕಲ್ 370 ನೇ ವಿಧಿಯನ್ನು ಜಾರಿಗೆ ತಂದಿದ್ದರಿಂದ ಕಳೆದ 70 ವರ್ಷಗಳಲ್ಲಿ , ಭಯೋತ್ಪಾದನೆ, ರಕ್ತಪಾತ, ಬಾಂಬ್ ಬ್ಲಾಸ್ಟ್ ಮುಂತಾದ ಅಹಿತಕರ ಘಟನೆಗಳು ನಡೆದಿದೆಯೇ ಹೊರತು ಯಾವುದೇ ಅಭಿವೃದ್ದಿಯಾಗಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


