ಅನರ್ಹ ಶಾಸಕರಿಗೆ ಮತ್ತಷ್ಟು ಟೆನ್ಶನ್: ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿದ 'ಸುಪ್ರೀಂ'!
ಬಿಜೆಪಿ ಸರ್ಕಾರ ರಚನೆಗೆ ಮುನ್ನುಡಿ ಬರೆದಿದ್ದ ಅನರ್ಹ ಶಾಸಕರ ಭವಿಷ್ಯ ಇನ್ನೂ ಅತಂತ್ರ ಸ್ಥಿತಿಯಲ್ಲಿದೆ, ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ನವದೆಹಲಿ: ಬಿಜೆಪಿ ಸರ್ಕಾರ ರಚನೆಗೆ ಮುನ್ನುಡಿ ಬರೆದಿದ್ದ ಅನರ್ಹ ಶಾಸಕರ ಭವಿಷ್ಯ ಇನ್ನೂ ಅತಂತ್ರ ಸ್ಥಿತಿಯಲ್ಲಿದೆ, ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.
15 ವಿಧಾನಸಭೆ ಕ್ಷೇತ್ರದ ಬೈ ಎಲೆಕ್ಷನ್‌ಗೆ ದಿನಾಂಕ ನಿಗದಿ ಮಾಡಿರುವ ಹಿನ್ನೆಲೆಯಲ್ಲಿ ಇಂದು ಸುಪ್ರೀಂಕೋರ್ಟ್ ವಿಚಾರಣೆ ಮಹತ್ವ ಪಡೆದಿತ್ತು,ಮಾಜಿ ಸ್ಪೀಕರ್ ರಮೇಶ್ ಕುಮಾರ್ 17 ಶಾಸಕರ ಸದಸ್ಯತ್ವವನ್ನು ಅನರ್ಹ ಗೊಳಿಸಿದ್ದರು.
ಈ ಅನರ್ಹತೆ ಪ್ರಶ್ನಿಸಿ 17 ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ರಮಣ್ ನೇತೃತ್ವದ ತ್ರಿ ಸದಸ್ಯ ಪೀಠ ವಿಚಾರಣೆಯನ್ನು ಮುಂದೂಡಿದೆ.
ಇನ್ನು ವಿಚಾರಣೆ ವೇಳೆ ಮಧ್ಯ ಪ್ರವೇಶಿಸಿದ ಚುನಾವಣಾ ಆಯೋಗದ ಮುಖ್ಯಸ್ಥ ರಾಕೇಶ್ ದ್ವಿವೇದಿ, ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಲು ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


