ದೇಶ

ಅತ್ಯಾಚಾರ ಪ್ರಕರಣ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ್ ಜಾಮೀನು ಅರ್ಜಿ ವಜಾ

ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಮೇಲೆ ಬಂಧನಕ್ಕೊಳಗಾಗಿರುವ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ್ ಅವರ ಜಾಮೀನು ಅರ್ಜಿಯನ್ನು...

ಅತ್ಯಾಚಾರ ಪ್ರಕರಣ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ್ ಜಾಮೀನು ಅರ್ಜಿ ವಜಾ
ಚಿನ್ಮಯಾನಂದ್
Published On :

ಶಹಜಾನ್ಪುರ್: ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಮೇಲೆ ಬಂಧನಕ್ಕೊಳಗಾಗಿರುವ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ್ ಅವರ ಜಾಮೀನು ಅರ್ಜಿಯನ್ನು ಉತ್ತರ ಪ್ರದೇಶ ಕೋರ್ಟ್ ವಜಾಗೊಳಿಸಿದೆ.

ಜಾಮೀನು ಕೋರಿ ಚಿನ್ಮಯಾನಂದ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಶಹಜಾನ್ಪುರ್ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಅವರು ವಜಾಗೊಳಿಸಿದ್ದಾರೆ ಮತ್ತು ಜಾಮೀನಿಗಾಗಿ ಸೆಷನ್ಸ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವಂತೆ ಸೂಚಿಸಿರುವುದಾಗಿ ಆರೋಪಿ ಪರ ವಕೀಲ ಓಂ ಸಿಂಗ್ ಅವರು ತಿಳಿಸಿದ್ದಾರೆ.

ಇದೇ ವೇಳೆ ಸ್ವಾಮಿ ಚಿನ್ಮಯಾನಂದ್ ಅವರಿಗೆ ಹಣಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಸಂಜಯ್, ಸಚಿನ್​ ಮತ್ತು ವಿಕ್ರಂ ಎಂಬ ಜಾಮೀನು ಅರ್ಜಿಯನ್ನು ಸಹ ಕೋರ್ಟ್ ವಜಾಗೊಳಿಸಿದೆ.

ಮಾಜಿ ಕೇಂದ್ರ ಸಚಿವ ಸ್ವಾಮಿ ಚಿನ್ಮಯಾನಂದ್ ಅವರು ಒಂದು ವರ್ಷಗಳ ಕಾಲ ತನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾರೆ ಎಂದು ಶೆಹಜಾನ್ಪುರದ ಕಾನೂನು ವಿದ್ಯಾರ್ಥಿನಿ ಆರೋಪಿಸಿದ್ದರು. ಈ ಸಂಬಂಧ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿ, ಕೋರ್ಟ್ ನಲ್ಲಿ ಹೇಳಿಕೆ ದಾಖಲಿಸಿದ ನಂತರ ಆರೋಪಿ ಚಿನ್ಮಯಾನಂದ್ ಅವರನ್ನು ಎಸ್ಐಟಿ ಅಧಿಕಾರಿಗಳು ಕಳೆದ ಶುಕ್ರವಾರ ಬಂಧಿಸಿದ್ದರು. ಬಳಿಕ ಆರೋಪಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.