ಪಿಎಂಸಿ ಬ್ಯಾಂಕ್ ಗೆ ಆರ್ ಬಿಐ ನಿರ್ಬಂಧ, ವಿತ್ ಡ್ರಾ ಮಿತಿ ಗರಿಷ್ಠ 1 ಸಾವಿರ
ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್(ಪಿಎಂಸಿ) ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ ಹಲವು ನಿರ್ಬಂಧಗಳನ್ನು ವಿಧಿಸಿದ್ದು, ಬ್ಯಾಂಕ್ ಗ್ರಾಹಕರಲ್ಲಿ ಹಾಗೂ ಉದ್ಯಮ ವಲಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಮುಂಬೈ: ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್(ಪಿಎಂಸಿ) ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ ಹಲವು ನಿರ್ಬಂಧಗಳನ್ನು ವಿಧಿಸಿದ್ದು, ಬ್ಯಾಂಕ್ ಗ್ರಾಹಕರಲ್ಲಿ ಹಾಗೂ ಉದ್ಯಮ ವಲಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.
ಆರ್ ಬಿಐ ಸೂಚನೆಯ ಪ್ರಕಾರ, ಯಾವುದೇ ಉಳಿತಾಯ, ಚಾಲ್ತಿ ಖಾತೆ ಮತ್ತು ಇತರೆ ಠೇವಣಿ ಖಾತೆಗಳಿಂದ ಗ್ರಾಹಕರು ಗರಿಷ್ಠ 1 ಸಾವಿರ ರೂಪಾಯಿ ಮಾತ್ರ ವಿತ್ ಡ್ರಾ ಮಾಡಬುಹುದು ಎಂದು ಪಿಎಂಸಿ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಯೋಗೇಶ್ ದಯಾಳ್ ಅವರು ತಿಳಿಸಿದ್ದಾರೆ.
ಬಹು-ರಾಜ್ಯ ಸಹಕಾರಿ ಬ್ಯಾಂಕ್ ಎಂದೇ ಖ್ಯಾತಿ ಪಡೆದಿರುವ ಪಿಎಂಸಿ ಬ್ಯಾಂಕ್, ಕರ್ನಾಟಕ, ಮಹಾರಾಷ್ಟ್ರ ದೆಹಲಿ, ಗೋವಾ, ಗುಜರಾತ್, ಆಂಧ್ರ ಪ್ರದೇಶ ಮತ್ತು ಮಧ್ಯ ಪ್ರದೇಶದಲ್ಲಿ ತನ್ನ ಶಾಖೆಗಳನ್ನು ಹೊಂದಿದೆ.
1984ರಲ್ಲಿ ಮುಂಬೈನಲ್ಲಿ ಸ್ಥಾಪನೆಯಾದ ಈ ಸಹಕಾರಿ ಬ್ಯಾಂಕ್ ಈಗ ಆರು ರಾಜ್ಯಗಳಲ್ಲಿ ಒಟ್ಟು 137 ಶಾಖೆಗಳನ್ನು ಹೊಂದಿದೆ ಮತ್ತು ದೇಶದ ಟಾಪ್ 10 ಸಹಕಾರಿ ಬ್ಯಾಂಕ್ ಗಳಲ್ಲಿ ಒಂದಾಗಿದೆ.
ಈ ಸಹಕಾರಿ ಬ್ಯಾಂಕ್ ಯಾವುದೇ ನಗದು ವಿತರಿಸುವುದನ್ನು ನಿರ್ಬಂಧಿಸಿದೆ. ಯಾವುದೇ ಪಾವತಿಯನ್ನು ಸ್ವೀಕರಿಸುವುದ, ಅದರ ಹೊಣೆಗಾರಿಕೆಗಳು ಮತ್ತು ಕಟ್ಟುಪಾಡುಗಳನ್ನು ಹೊರಹಾಕುವಲ್ಲಿ ಅಥವಾ ಯಾವುದೇ ರಾಜಿ ಅಥವಾ ವ್ಯವಸ್ಥೆಗಳಿಗೆ ಪ್ರವೇಶಿಸಿ ಮತ್ತು ಅದರ ಯಾವುದೇ ಆಸ್ತಿ ಅಥವಾ ಸ್ವತ್ತುಗಳನ್ನು ಮಾರಾಟ ಮಾಡುವುದು, ವರ್ಗಾಯಿಸುವುದು ಅಥವಾ ವಿಲೇವಾರಿ ಮಾಡುವುದನ್ನು ನಿರ್ಭಂಧಿಸಲಾಗಿದೆ ಎಂದು ಸೋಮವಾರ ಆರ್‌ಬಿಐ ಅಧಿಸೂಚನೆ ಹೊರಡಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


