ವಿಶ್ವನಾಯಕರನ್ನೆ ತರಾಟೆಗೆ ತೆಗೆದುಕೊಂಡ ಗ್ರೆಟಾ ಥನ್ಬರ್ಗ್' ಸ್ಪೂರ್ತಿಯಾಗಿದ್ದಾರೆ- ರೋಹಿತ್
ವಿಶ್ವಸಂಸ್ಥೆ ಹವಾಮಾನ ಶೃಂಗದಲ್ಲಿ ವಿಶ್ವ ನಾಯಕರನ್ನೇ ತರಾಟೆಗೆ ತೆಗೆದುಕೊಂಡ ಸ್ವೀಡನ್ ದೇಶದ ಯುವ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್ಬರ್ಗ್ ಸಾಮಾಜಿಕ ಜಾಲತಾಣಗಳಲ್ಲಿ ಬಿರುಗಾಳಿ ಎಬ್ಬಿಸಿರುವಂತೆ ಟೀಂ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರನ್ನು ಹೊಗಳಿದ್ದಾರೆ.

ನವದೆಹಲಿ: ವಿಶ್ವಸಂಸ್ಥೆ ಹವಾಮಾನ ಶೃಂಗದಲ್ಲಿ ವಿಶ್ವ ನಾಯಕರನ್ನೇ ತರಾಟೆಗೆ ತೆಗೆದುಕೊಂಡ ಸ್ವೀಡನ್ ದೇಶದ ಯುವ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್ಬರ್ಗ್ ಸಾಮಾಜಿಕ ಜಾಲತಾಣಗಳಲ್ಲಿ ಬಿರುಗಾಳಿ ಎಬ್ಬಿಸಿರುವಂತೆ ಟೀಂ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರನ್ನು ಹೊಗಳಿದ್ದಾರೆ.
ಹವಾಮಾನ ವೈಪರೀತ್ಯ ಕುರಿತಂತೆ ಜನ ಜಾಗೃತಿ ಮೂಡಿಸುವ ಕೆಲಸದಲ್ಲಿ ನಿರತರಾಗಿರುವ 16 ವರ್ಷದ ಗ್ರೇಟ್ ಥನ್ಬರ್ಗ್, ಸ್ಪೂರ್ತಿಯ ಸೆಲೆಯಾಗಿದ್ದಾರೆ ಎಂದು ರೋಹಿತ್ ಶರ್ಮಾ ಕೊಂಡಾಡಿದ್ದಾರೆ.
ನಮ್ಮ ಗ್ರಹದ ರಕ್ಷಣೆ ಮಾಡುವುದನ್ನು ನಮ್ಮ ಮಕ್ಕಳಿಗೆ ನೀಡುವುದು ನ್ಯಾಯವಲ್ಲ. ಗ್ರೆಟಾ ಥನ್ಬರ್ಗ್ ನೀವು ಸ್ಪೂರ್ತಿಯಾಗಿದ್ದೀರಿ. ಇದೀಗ ಕ್ಷಮೆ ಎಂಬುದೇ ಇಲ್ಲ.ಭವಿಷ್ಯದ ಪೀಳಿಗೆಗೆ ನಾವು ಸುರಕ್ಷಿತ ಗ್ರಹವೊಂದನ್ನು ನೀಡಬೇಕಾಗಿದೆ. ಬದಲಾವಣೆಯ ಸಮಯ ಇದಾಗಿದೆ ಎಂದು ರೋಹಿತ್ ಶರ್ಮಾ ಟ್ವೀಟ್ ಮಾಡಿದ್ದಾರೆ.
ವಿಶ್ವಸಂಸ್ಥೆ ಹವಾಮಾನ ಶೃಂಗದಲ್ಲಿ ಜಾಗತಿಕ ತಾಪಮಾನ ನಿಯಂತ್ರಣ, ಹಸಿರುಮನೆ ಅನಿಲ ಹೊರಸೂಸುವಿಕೆ ನಿಯಂತ್ರಣ ಮಾಡಲು ವಿಫಲರಾಗಿರುವ ವಿಶ್ವನಾಯಕರು ನನ್ನ ಪೀಳಿಗೆಗೆ ದ್ರೋಹ ಮಾಡಿದ್ದಾರೆ, ನಿಮಗೆ ಎಷ್ಟು ಧೈರ್ಯ ಎಂದು ಹಿಗ್ಗಾ-ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಳು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


