ದೇಶ

ತಿಹಾರ್ ಜೈಲಿನಲ್ಲಿ ಡಿಕೆಶಿ ಭೇಟಿ ಮಾಡಿದ ಸೋನಿಯಾ ಆಪ್ತ ಅಹ್ಮದ್ ಪಟೇಲ್

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಸೋನಿಯಾ ಗಾಂಧಿ ಆಪ್ತ ಅಹ್ಮದ್ ಪಟೇಲ್ ಇಂದು ಭೇಟಿ ಮಾಡಿದ್ದಾರೆ.

ತಿಹಾರ್ ಜೈಲಿನಲ್ಲಿ ಡಿಕೆಶಿ ಭೇಟಿ ಮಾಡಿದ ಸೋನಿಯಾ ಆಪ್ತ ಅಹ್ಮದ್ ಪಟೇಲ್
ಅಹ್ಮದ್ ಪಟೇಲ್
Published On :

ದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಸೋನಿಯಾ ಗಾಂಧಿ ಆಪ್ತ ಅಹ್ಮದ್ ಪಟೇಲ್ ಇಂದು ಭೇಟಿ ಮಾಡಿದ್ದಾರೆ.

ತಿಹಾರ್ ಜೈಲಿಗೆ ಭೇಟಿ ನೀಡಿದ್ದ ಅಹ್ಮದ್ ಪಟೇಲ್ ಅವರು ಡಿಕೆ ಶಿವಕುಮಾರ್ ಅವರಿಗೆ ಧೈರ್ಯ ತುಂಬಿದ್ದು, ಮುಂದಿನ ಕಾನೂನು ಹೋರಾಟದಲ್ಲಿ ಪಕ್ಷ ನಿಮ್ಮ ಬೆಂಬಲಕ್ಕೆ ನಿಲ್ಲಲಿದೆ ಎಂದು ಆಶ್ವಾಸನೆ ನೀಡಿರುವುದಾಗಿ ಮಾಹಿತಿ ಲಭಿಸಿದೆ. ಈ ಸಂದರ್ಭದಲ್ಲಿ ಮಾಜಿ ಸಚಿವ, ರಾಜ್ಯಸಭಾ ಸಂಸದ ಆನಂದ್ ಶರ್ಮಾ, ಸಹೋದರ ಡಿಕೆ ಸುರೇಶ್ ಕೂಡ ಹಾಜರಿದ್ದರು.

ಗುಜರಾತ್‍ನಲ್ಲಿ ನಡೆದಿದ್ದ ರಾಜ್ಯಸಭಾ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಗೆಲುವಿಗೆ ಡಿಕೆ ಶಿವಕುಮಾರ್ ಕಾರಣರಾಗಿದ್ದರು. ಆ ವೇಳೆ ಆಪರೇಷನ್ ಕಮಲ ಭೀತಿಯಲ್ಲಿದ್ದ ಕಾಂಗ್ರೆಸ್ ತನ್ನ ಶಾಸಕರನ್ನ ಗುಜರಾತ್‍ನಿಂದ ಬೆಂಗಳೂರಿನ ಈಗಲ್‍ಟನ್ ರೆಸಾರ್ಟಿಗೆ ಶಿಫ್ಟ್ ಮಾಡಿತ್ತು. ಈ ವೇಳೆ ಶಾಸಕರಿಗೆ ರಕ್ಷಣೆ ನೀಡಿ ಪಕ್ಷದ ಬೆನ್ನಿಗೆ ಡಿಕೆಶಿ ನಿಂತಿದ್ದರು.

ನಿನ್ನೆ ಸುಪ್ರೀಂಕೋರ್ಟ್ ನ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ತಿರಸ್ಕಾರಗೊಂಡ ಹಿನ್ನಲೆಯಲ್ಲಿ ಇಂದು ಅಹ್ಮದ್ ಪಟೇಲ್ ಜೈಲಿಗೆ ತೆರಳಿ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.