ಪುಣೆ: ಭಾರೀ ಮಳೆಗೆ ಗೋಡೆ ಕುಸಿದು ಐವರ ದುರ್ಮರಣ
ಬುಧವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಪುಣೆ ಅಕ್ಷರಶಃ ತತ್ತರಿಸಿ ಹೋಗಿದ್ದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಪುಣೆ: ಬುಧವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಪುಣೆ ಅಕ್ಷರಶಃ ತತ್ತರಿಸಿ ಹೋಗಿದ್ದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಶಕರ್ ನಗರ್ ಬಳಿ ಗೋಡೆಯೊಂದು ಕುಸಿದು ಬಿದ್ದು ಮಗು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ಮೇಲೆತ್ತಲಾಗಿದೆ.
ಮತ್ತೊಂದೆಡೆ ಮುಂಬೈ ಖಾರ್ ಪ್ರದೇಶದಲ್ಲಿ ಮಂಗಳವಾರ ಕಟ್ಟಡದಡಿ ಸಿಲುಕಿದ್ದ 10 ವರ್ಷದ ಬಾಲಕಿ ಇಂದು ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಪುಣೆ ಗ್ರಾಮವೊಂದರಲ್ಲಿ ಕೇವಲ ಮೂರು ಗಂಟೆ ಅವಧಿಯಲ್ಲಿ 112 ಮಿ ಮೀ ಮಳೆಯಾಗಿ ದಾಖಲೆ ಸೃಷ್ಟಿಯಾಗಿದೆ. ಇದರ ಜೊತೆಗೆ ಮುಂಬೈ – ಪುಣೆ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


