ದೇಶ

ವಿದ್ಯಾಸಾಗರ್ ನಿವಾಸವನ್ನು ಸ್ಮಾರಕವನ್ನಾಗಿಸಲು ಪಶ್ಚಿಮ ಬಂಗಾಳ ಸರ್ಕಾರ ಯೋಜನೆ

19ನೇ ಶತಮಾನದ ಸಮಾಜ ಸುಧಾರಕ ಈಶ್ವರ್ ಚಂದ್ರ ವಿದ್ಯಾಸಾಗರ್ ನೆಲೆಸಿದ್ದ ಉತ್ತರ ಕೊಲ್ಕತ್ತಾದಲ್ಲಿನ ನಿವಾಸವನ್ನು ಸ್ಮಾರಕವನ್ನಾಗಿಸಲು ಪಶ್ಚಿಮ ಬಂಗಾಳ ಸರ್ಕಾರ ಯೋಜನೆ ಹಾಕಿಕೊಂಡಿದೆ ಎಂದು ಅಲ್ಲಿನ ಶಿಕ್ಷಣ ಸಚಿವ ಪಾರ್ಥ ಚಟ್ಟಾರ್ಜಿ ಹೇಳಿದ್ದಾರೆ.

ವಿದ್ಯಾಸಾಗರ್ ನಿವಾಸವನ್ನು ಸ್ಮಾರಕವನ್ನಾಗಿಸಲು ಪಶ್ಚಿಮ ಬಂಗಾಳ ಸರ್ಕಾರ ಯೋಜನೆ
ಮಮತಾ ಬ್ಯಾನರ್ಜಿ
Published On :

ಕೊಲ್ಕತ್ತಾ: 19ನೇ ಶತಮಾನದ ಸಮಾಜ ಸುಧಾರಕ ಈಶ್ವರ್ ಚಂದ್ರ ವಿದ್ಯಾಸಾಗರ್ ನೆಲೆಸಿದ್ದ ಉತ್ತರ ಕೊಲ್ಕತ್ತಾದಲ್ಲಿನ ನಿವಾಸವನ್ನು ಸ್ಮಾರಕವನ್ನಾಗಿಸಲು  ಪಶ್ಚಿಮ ಬಂಗಾಳ ಸರ್ಕಾರ ಯೋಜನೆ ಹಾಕಿಕೊಂಡಿದೆ ಎಂದು ಅಲ್ಲಿನ ಶಿಕ್ಷಣ ಸಚಿವ ಪಾರ್ಥ ಚಟ್ಟಾರ್ಜಿ ಹೇಳಿದ್ದಾರೆ.

ವಿದ್ಯಾಸಾಗರ್ ನಿವಾಸ ಬಾದುರ್ ಬಾಗನ್ ನ್ನು ಸ್ಮಾರಕವನ್ನಾಗಿ ನಿರ್ಮಾಣ ಮಾಡಲಾಗುವುದು, ಅಲ್ಲಿ ವಿದ್ಯಾಸಾಗರ್ ಅವರ ಭಾವಚಿತ್ರಗಳು, ಮಾದರಿಗಳನ್ನು ಇಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈಶ್ವರ್ ಚಂದ್ರ ವಿದ್ಯಾಸಾಗರ್ ಅವರ 200ನೇ ಜನ್ಮ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾಸಾಗರ್ ಅಕಾಡೆಮಿ ಉದ್ಘಾಟಿಸಿ, ಅಮಾಡರ್ ವಿದ್ಯಾಸಾಗರ್ ಮತ್ತು ಚೊಟೊದಾರ್ ವಿದ್ಯಾಸಾಗರ್ ಪ್ರತಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಪಾರ್ಥ ಚಟ್ಟಾರ್ಜಿ, ವಿದ್ಯಾಸಾಗರ್ ಮನೆಯಲ್ಲಿ ಬಳಸಲಾಗುತ್ತಿದ್ದ ದಿನಬಳಕೆಯ ವಸ್ತುಗಳನ್ನು ಸ್ಮಾರಕಗಳಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.