ಮೈಸೂರು ಅರಮನೆಗೆ ಆಗಮಿಸಿದ ಪ್ರವಾಸಿಗರಿಗೆ ವಿಶೇಷ ಸ್ವಾಗತ
ನಾಡಹಬ್ಬ ಮೈಸೂರು ದಸರಾ ಹಬ್ಬ ವೀಕ್ಷಿಸಲು ಮೈಸೂರು ಅರಮನೆಗೆ ಆಗಮಿಸಿದ ಪ್ರವಾಸಿಗರಿಗೆ ಹೂ ಮತ್ತು ಮೈಸೂರು ಪಾಕ್ ನೀಡಿ, ಪ್ರವಾಸೋದ್ಯಮ ಇಲಾಖೆ ವಿಶೇಷವಾಗಿ ಬರಮಾಡಿಕೊಂಡಿತು.

ಮೈಸೂರು: ನಾಡಹಬ್ಬ ಮೈಸೂರು ದಸರಾ ಹಬ್ಬ ವೀಕ್ಷಿಸಲು ಮೈಸೂರು ಅರಮನೆಗೆ ಆಗಮಿಸಿದ ಪ್ರವಾಸಿಗರಿಗೆ ಹೂ ಮತ್ತು ಮೈಸೂರು ಪಾಕ್ ನೀಡಿ, ಪ್ರವಾಸೋದ್ಯಮ ಇಲಾಖೆ ವಿಶೇಷವಾಗಿ ಬರಮಾಡಿಕೊಂಡಿತು.
ಶುಕ್ರವಾರ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ವಿಶೇಷ ಅಭಿಯಾನ ನಡೆಸಿ ಎಲ್ಲಾ ಪ್ರವಾಸಿಗರನ್ನು ಸ್ವಾಗತಿಸಿತು.
ಪ್ರವಾಸೋದ್ಯಮ ಇಲಾಖೆಗೆ ಟ್ರಾವೆಲ್ಸ್ ಅಸೋಸಿಯೇಷನ್ ಕೂಡ ಕೈಜೋಡಿಸಿದ್ದು, ವೀರಭದ್ರಕುಣಿತ-ಡೊಳ್ಳು ಕುಣಿತ ತಂಡದಿಂದ ಪ್ರವಾಸಿಗರಿಗೆ ಅದ್ದೂರಿ ಸ್ವಾಗತ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಖುಷಿಯಿಂದ ಡೊಳ್ಳು ಕುಣಿತದವರ ಜೊತೆಗೆ ವಿದೇಶಿ ಪ್ರವಾಸಿಗರು ಭರ್ಜರಿ ನೃತ್ಯ ಮಾಡಿದರು.
ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರವಾಸಿಗರಿಗೂ ವಿಶೇಷ ಸ್ವಾಗತ ಮಾಡಿ, ಮೈಸೂರಿಗೆ ಹೆಚ್ಚು ಹೆಚ್ಚು ಪ್ರವಾಸಿಗರು ಆಗಮಿಸಲೆಂದು ಟ್ರಾವೆಲ್ಸ್ ಅಸೋಸಿಯೇಷನ್ ಮನವಿ ಮಾಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


