ದೇಶ

ಮಹಾರಾಷ್ಟ್ರ ಚುನಾವಣೆ: ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ, ಮಾಜಿ ಸಿಎಂ ಅಶೋಕ್ ಚವ್ಹಾಣ್ ಭಿಕಾರ್ ಕ್ಷೇತ್ರದಿಂದ ಕಣಕ್ಕೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ 51 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ ಬಿಡುಗಡೆ ಮಾಡಿದೆ. ಭಿಕಾರ್ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಅಶೋಕ್ ಚವ್ಹಾಣ್ ಹಾಗೂ ಮಂಗಂಪುರ್ ಕ್ಷೇತ್ರದಿಂದ ಕ್ಷದ ಮುಖ್ಯಸ್ಥ ವಿಜಯ್ ಬಾಲಾಸಾಹೇಬ್ ತೋರತ್ ಅವರನ್ನು ಕಣಕ್ಕಿಳಿಸಲು ಕೈ ಪಾಳಯ ನಿರ್ಧರಿಸಿದೆ.

ಮಹಾರಾಷ್ಟ್ರ ಚುನಾವಣೆ: ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ, ಮಾಜಿ ಸಿಎಂ ಅಶೋಕ್ ಚವ್ಹಾಣ್ ಭಿಕಾರ್ ಕ್ಷೇತ್ರದಿಂದ ಕಣಕ್ಕೆ
ಅಶೋಕ್ ಚವ್ಹಾಣ್
Published On :

ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ 51 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ ಬಿಡುಗಡೆ ಮಾಡಿದೆ. ಭಿಕಾರ್ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಅಶೋಕ್ ಚವ್ಹಾಣ್ ಹಾಗೂ ಮಂಗಂಪುರ್ ಕ್ಷೇತ್ರದಿಂದ ಕ್ಷದ ಮುಖ್ಯಸ್ಥ ವಿಜಯ್ ಬಾಲಾಸಾಹೇಬ್ ತೋರತ್ ಅವರನ್ನು ಕಣಕ್ಕಿಳಿಸಲು ಕೈ ಪಾಳಯ ನಿರ್ಧರಿಸಿದೆ.

ಮಾಜಿ ಮುಖ್ಯಮಂತ್ರಿ ವಿಲಾಸ್ ರಾವ್ ದೇಶಮುಖ್ ಅವರ ಪುತ್ರ ಅಮಿತ್ ದೇಶಮುಖ್ ಅವರನ್ನು ಲಾತೂರ್ ಸಿಟಿ ಸ್ಥಾನದಿಂದ ಕಣಕ್ಕಿಳಿಸಲಾಗಿದ್ದು, ಮಾಜಿ ಗೃಹ ಸಚಿವ ಸುಶೀಲ್ ಕುಮಾರ್  ಶಿಂಧೆ ಅವರ ಪುತ್ರಿ ಪ್ರಣಿತಿ ಸೋಲಾಪುರ ನಗರ ಕೇಂದ್ರ ಸ್ಥಾನದಿಂದ ಸ್ಪರ್ಧಿಸಲಿದ್ದಾರೆ

ಪಕ್ಷದ ಎಸ್‌ಸಿ ವಿಭಾಗದ ಮುಖ್ಯಸ್ಥರಾಗಿರುವ ಪಕ್ಷದ ಹಿರಿಯ ಮುಖಂಡ ನಿತಿನ್ ರೌತ್ ಅವರನ್ನು ನಾಗ್ಪುರ ಉತ್ತರ (ಮೀಸಲು) ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.

ಪಕ್ಷದ ಕೇಂದ್ರ ಚುನಾವಣಾ ಸಮಿತಿಯು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಹೆಸರುಗಳನ್ನು ಅಂತಿಮಗೊಳಿಸಿದೆ.ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ಅಕ್ಟೋಬರ್ 21 ರಂದು ನಡೆಯಲಿದ್ದು, ಅಕ್ಟೋಬರ್ 24 ರಂದು ಫಲಿತಾಂಶ ಹೊರಬರಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.