ಹರಿಯಾಣ ಚುನಾವಣೆ: ಬಿಜೆಪಿಯಿಂದ ಯೋಗೇಶ್ವರ್, ಬಬಿತಾ ಸೇರಿ 78 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಅಕ್ಟೋಬರ್ 21ರಂದು ನಡೆಯಲಿರುವ ಹರಿಯಾಣ ವಿಧಾನಸಭೆ ಚುನಾವಣೆಗೆ ಆಡಳಿರೂಢ ಬಿಜೆಪಿ 78 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದ್ದು, ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್....

ನವದೆಹಲಿ: ಅಕ್ಟೋಬರ್ 21ರಂದು ನಡೆಯಲಿರುವ ಹರಿಯಾಣ ವಿಧಾನಸಭೆ ಚುನಾವಣೆಗೆ ಆಡಳಿರೂಢ ಬಿಜೆಪಿ 78 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದ್ದು, ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಮತ್ತೆ ಕರ್ನಲ್ ನಿಂದ ಕಣಕ್ಕಿಳಿಸಲಾಗಿದೆ.
ಬಿಜೆಪಿ ಈ ಬಾರಿ ಭಾರತದ ಹಾಕಿ ತಂಡದ ಮಾಜಿ ನಾಯಕ ಸಂದೀಪ್ ಸಿಂಗ್, ಓಲಿಂಪಿಕ್ ಪದಕ ವಿಜೇತ ಯೇಗೇಶ್ವರ್ ದತ್, ಇತ್ತೀಚಿಗಷ್ಟೇ ಕೇಸರಿಪಡೆ ಸೇರಿದ ಕುಸ್ತಿಪಟು ಬಬಿತಾ ಫೋಗಟ್ ಸೇರಿದಂತೆ ಹಲವು ಮಾಜಿ ಕ್ರೀಡಾಪಟುಗಳಿಗೆ ಟಿಕೆಟ್ ನೀಡಲಾಗಿದೆ.
ಅಭ್ಯರ್ಥಿಗಳ ಆಯ್ಕೆ ಸಂಬಂಧ ನಿನ್ನೆ ದೆಹಲಿಯಲ್ಲಿ ಸಭೆ ಸೇರಿದ್ದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ, 38 ಹಾಲಿ ಶಾಸಕರು ಸೇರಿದಂತೆ 78 ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ ಮತ್ತು ಏಳು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರ್ಜುನ್ ಸಿಂಗ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.
90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


