ಪಶು ವೈದ್ಯೆ 'ಹತ್ಯಾಚಾರ'; ವ್ಯಾಪಕ ಟೀಕೆಗಳ ಬಳಿಕ ಕೊನೆಗೂ ಮೌನಮುರಿದ ತೆಲಂಗಾಣ ಸಿಎಂ
ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡದೇ ಟೀಕೆಗಳಿಗೆ ತುತ್ತಾಗಿದ್ದ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರು ಕೊನೆಗೂ ತಮ್ಮ ಮೌನ ಮುರಿದಿದ್ದು, ಪ್ರಕರಣ ಸಂಬಂಧ ತ್ವರಿತ ವಿಚಾರಣೆಗೆ ಆದೇಶಿಸಿದ್ದಾರೆ.

ಹೈದರಾಬಾದ್: ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡದೇ ಟೀಕೆಗಳಿಗೆ ತುತ್ತಾಗಿದ್ದ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರು ಕೊನೆಗೂ ತಮ್ಮ ಮೌನ ಮುರಿದಿದ್ದು, ಪ್ರಕರಣ ಸಂಬಂಧ ತ್ವರಿತ ವಿಚಾರಣೆಗೆ ಆದೇಶಿಸಿದ್ದಾರೆ.
ಈ ಕುರಿತಂತೆ ಭಾನುವಾರ ಸಭೆ ಬಳಿಕ ಸಿಎಂ ಕೆಸಿಆರ್ ಪ್ರಕರಣವನ್ನು ತ್ವರಿತ ವಿಚಾರಣೆ ನಡೆಸುವಂತೆ ಆದೇಶಿಸಿದ್ದು, ಇದಕ್ಕಾಗಿ ವಿಶೇಷ ತುರ್ತು ಮತ್ತು ತ್ವರಿತ ವಿಚಾರಣಾ ನ್ಯಾಯಪೀಠ ರಚನೆ ಮಾಡಲು ಆದೇಶ ನೀಡಿದ್ದಾರೆ. ಅಲ್ಲದೆ ಸಂತ್ರಸ್ಥೆಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿರುವ ಅವರು, ಸಂತ್ರಸ್ಥೆಯ ಪೋಷಕರಿಗೆ ತೆಲಂಗಾಣ ಸರ್ಕಾರ ಅಗತ್ಯ ನೆರವು ನೀಡಲು ಸಿದ್ಧವಾಗಿದೆ. ಕಾನೂನಾತ್ಮಕವಾಗಿ ಮಾತ್ರವಲ್ಲದೇ ಕುಟುಂಬಕ್ಕೆ ನೈತಿಕ ಸ್ಛೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಲಿದೆ. ಕುಟುಂಬಕ್ಕೆ ಬೇಕಾದ ಎಲ್ಲ ರೀತಿಯ ಅಗತ್ಯ ನೆರವನ್ನು ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ.
ಇನ್ನು ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರಕರಣವನ್ನು ಭಯಂಕರ ಮತ್ತು ಅತ್ಯಂತ ನೀಚ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಯಾವುದೇ ಕಾರಣಕ್ಕೂ ಅತ್ಯಾಚಾರಿಗಳು ತಪ್ಪಿಸಿಕೊಳ್ಳದಂತೆ ಅವರಿಗೆ ಕಠಿಣ ಶಿಕ್ಷೆ ವಿಧಿಸುವ ಕಾರ್ಯ ಸರ್ಕಾರ ಮಾಡಲಿದೆ ಎಂದು ಹೇಳಿದ್ದಾರೆ. ಅಲ್ಲದೆ ಪ್ರಕರಣದ ಕುರಿತ ತೀರ್ಪು ಶೀಘ್ರವೇ ಹೊರಬರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


