ದೇಶ

ಐಎನ್ ಎಕ್ಸ್ ಮೀಡಿಯಾ ಕೇಸ್: 105 ದಿನಗಳ ನಂತರ ಪಿ.ಚಿದಂಬರಂ ಗೆ ಷರತ್ತುಬದ್ಧ ಜಾಮೀನು

ಐಎನ್‌ಎಕ್ಸ್ ಮೀಡಿಯಾ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.

ಐಎನ್ ಎಕ್ಸ್ ಮೀಡಿಯಾ ಕೇಸ್: 105 ದಿನಗಳ ನಂತರ ಪಿ.ಚಿದಂಬರಂ ಗೆ ಷರತ್ತುಬದ್ಧ ಜಾಮೀನು
ಚಿದಂಬರಂ
Published On :

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ಆರ್. ಭಾನುಮತಿ ನೇತೃತ್ವದ  ತ್ರಿಸದಸ್ಯ ಪೀಠ ಚಿದಂಬರಂ ಅವರಿಗೆ 105 ದಿನಗಳ ನಂತರ ಜಾಮೀನು ನೀಡಿದೆ, ಪಾಸ್ ಪೋರ್ಟ್ ಅನ್ನು ವಶಕ್ಕೆ ನೀಡುವಂತೆ ಸೂಚಿಸಿರುವ ಪೀಠ ಯಾರಿಗೂ ಸಂದರ್ಶನ, ಸಾರ್ವಜನಿಕ ಹೇಳಿಕೆ ನೀಡಬಾರದು ಎಂದು ಸೂಚಿಸಿದೆ.

ನವೆಂಬರ್ 15ರಂದು ಚಿದಂಬರಂ ಅರ್ಜಿ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್​ ಜಾಮೀನು ನಿರಾಕರಿಸಿತ್ತು. ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂ ಪ್ರಮುಖ ಪಾತ್ರವಹಿಸಿದ್ದು, ಅವರಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು. ಇಂದು ಜಾಮೀನು ಅರ್ಜಿಯ ಅಂತಿಮ ತೀರ್ಪು ಹೊರಬಿದ್ದಿದೆ.

ಕಳೆದ ಆಗಸ್ಟ್ 21 ರಂದು ಸಿಬಿಐ ಚಿದಂಬರಂ ಅವರನ್ನು ಬಂಧಿಸಿತ್ತು,  ಚಿದಂಬರಮ್ ಅವರು 2007ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಐಎನ್​ಎಕ್ಸ್ ಮೀಡಿಯಾ ಸಂಸ್ಥೆಗೆ 305 ಕೋಟಿ ರೂ ಮೊತ್ತದಷ್ಟು ವಿದೇಶೀ ಬಂಡವಾಳ ಹೂಡಿಕೆಗೆ ವಿದೇಶ ಬಂಡವಾಳ ಹೂಡಿಕೆ ಪ್ರೋತ್ಸಾಹಕ ಮಂಡಳಿ (ಎಫ್​ಐಪಿಬಿ)ಯ ಅನುಮೋದನೆ ಸಿಕ್ಕಿತ್ತು. ಮಗನ ಶಿಫಾರಸಿನ ಮೇಲೆ ಈ ಅನುಮೋದನೆಯನ್ನು ಚಿದಂಬರಂ ದೊರಕಿಸಿಕೊಟ್ಟಿದ್ದರೆಂಬ ಆರೋಪವಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.