ರಾಹುಲ್ ಗಾಂಧಿ 'ರೇಪ್' ಹೇಳಿಕೆ: ಲೋಕಸಭೆಯಲ್ಲಿ ಬಿಜೆಪಿ ನಾಯಕರಿಂದ ತೀವ್ರ ಗದ್ದಲ, ಕಲಾಪ ಮುಂದೂಡಿಕೆ
ಭಾರತ ವಿಶ್ವದ ರೇಪ್ ನ ರಾಜಧಾನಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಲೋಕಸಭೆಯಲ್ಲಿ ಶುಕ್ರವಾರ ಬಿಜೆಪಿ ಸದಸ್ಯರು ತೀವ್ರ ಪ್ರತಿಭಟನೆ ನಡೆಸಿದ್ದರಿಂದ ಕಲಾಪ ಮುಂದುವರಿಸಲು ಸಾಧ್ಯವಾಗದೆ ಅರ್ಧ ಗಂಟೆಗಳ ಕಾಲ ಕಲಾಪವನ್ನು ಮುಂದೂಡಲಾಯಿತು.

ನವದೆಹಲಿ; ಭಾರತ ವಿಶ್ವದ ರೇಪ್ ನ ರಾಜಧಾನಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಲೋಕಸಭೆಯಲ್ಲಿ ಶುಕ್ರವಾರ ಬಿಜೆಪಿ ಸದಸ್ಯರು ತೀವ್ರ ಪ್ರತಿಭಟನೆ ನಡೆಸಿದ್ದರಿಂದ ಕಲಾಪ ಮುಂದುವರಿಸಲು ಸಾಧ್ಯವಾಗದೆ ಅರ್ಧ ಗಂಟೆಗಳ ಕಾಲ ಕಲಾಪವನ್ನು ಮುಂದೂಡಲಾಯಿತು.
ರಾಹುಲ್ ಗಾಂಧಿ ತಮ್ಮ ಹೇಳಿಕೆಯಿಂದ ದೇಶದ ಮಹಿಳೆಯರನ್ನು ಅವಮಾನಿಸಿದ್ದು ಅವರಿಗೆ ನಾಚಿಕೆ ತರುವ ವಿಷಯವಾಗಿದೆ. ಹೀಗಾಗಿ ಅವರು ಕ್ಷಮೆ ಕೇಳಬೇಕೆಂದು ಒತ್ತಾಯಿಸಿ ಸಚಿವರು ಸೇರಿದಂತೆ ಬಿಜೆಪಿ ಸದಸ್ಯರು ಒತ್ತಾಯಿಸಿದರು.
ಆಡಳಿತಾರೂಢ ಬಿಜೆಪಿ ಸದಸ್ಯರು ಸದನದ ಪಡಸಾಲೆಯಲ್ಲಿ ತೀವ್ರ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸದಸ್ಯರು ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.
ಈ ಸಂದರ್ಭದಲ್ಲಿ ಕಲಾಪವನ್ನು ಮುಂದೂಡಲು ಸಾಧ್ಯವಾಗದೆ ಸ್ಪೀಕರ್ ಓಂ ಬಿರ್ಲಾ ಅರ್ಧ ಗಂಟೆಗಳ ಕಾಲ ಮುಂದೂಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


