'ಬರೀ ನಾಟಕ': ರಾಜನಾಥ್ ಸಿಂಗ್ ರಫೆಲ್ ಶಸ್ತ್ರ ಪೂಜೆಗೆ ಮಲ್ಲಿಕಾರ್ಜುನ್ ಖರ್ಗೆ ಟಾಂಗ್
ವಿಜಯದಶಮಿಯಂದು ಫ್ರಾನ್ಸ್ ಸರ್ಕಾರ ಭಾರತಕ್ಕೆ ಹಸ್ತಾಂತರಿಸಿದ ರಫೆಲ್ ಯುದ್ಧ ವಿಮಾನಕ್ಕೆ ಶಸ್ತ್ರ ಪೂಜೆ ಸಲ್ಲಿಸಿ ನಾಟಕ ಮಾಡುವ ಅಗತ್ಯವಿರಲಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಖರ್ಗೆ ಅವರು ಬುಧವಾರ...

ಬೆಂಗಳೂರು: ವಿಜಯದಶಮಿಯಂದು ಫ್ರಾನ್ಸ್ ಸರ್ಕಾರ ಭಾರತಕ್ಕೆ ಹಸ್ತಾಂತರಿಸಿದ ರಫೆಲ್ ಯುದ್ಧ ವಿಮಾನಕ್ಕೆ ಶಸ್ತ್ರ ಪೂಜೆ ಸಲ್ಲಿಸಿ ನಾಟಕ ಮಾಡುವ ಅಗತ್ಯವಿರಲಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಖರ್ಗೆ ಅವರು ಬುಧವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಟಾಂಗ್ ನೀಡಿದ್ದಾರೆ.
ಈ ಹಿಂದೆ ನಾವು ಬೋಪೋರ್ಸ್ ಗನ್ ನಂತಹ ಶಸ್ತ್ರಾಸ್ತ್ರಗಳನ್ನು ಖರೀದಿಸಿದಾಗ ಅವುಗಳನ್ನು ತರಲು ಮತ್ತು ಪ್ರಚಾರ ಗಿಟ್ಟಿಸಿಕೊಳ್ಳಲು ಯಾರೂ ಹೋಗಿರಲಿಲ್ಲ.. ಆದರೆ ರಾಜನಾಥ್ ಸಿಂಗ್ ಅವರು ವಿಮಾನಕ್ಕೆ ಆಯುಧ ಪೂಜೆ ಮಾಡುವ ಮೂಲಕ ನಾಟಕ ಮಾಡುವ ಅಗತ್ಯ ಇರಲಿಲ್ಲ ಎಂದಿದ್ದಾರೆ.
ಭಾರತೀಯ ವಾಯುಪಡೆಯ ಅಧಿಕಾರಿಗಳು, ಆ ವಿಮಾನಗಳು ಸಮರ್ಥವಾಗಿಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಿದ್ದಾರೆ. ಆದರೆ ಇವರು ಅಲ್ಲಿಗೆ ಹೋಗಿ, ಆ ವಿಮಾನದಲ್ಲಿ ಕುಳಿತು ಪ್ರಚಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಖರ್ಗೆ ಹೇಳಿರುವುದಾಗಿ ಎಎನ್ಐ ಟ್ವೀಟ್ ಮಾಡಿದೆ.
ನಿನ್ನೆಯಷ್ಟೇ ಅಧಿಕೃತವಾಗಿ ಮೊದಲ ರಫೆಲ್ ಯುದ್ಧ ವಿಮಾನ ಸ್ವೀಕರಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅದಕ್ಕೆ ಆಯುಧ ಪೂಜೆ ಮಾಡಿದ್ದರು. ಅಲ್ಲದೆ ಓಂ ಎಂದು ಬರೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


