ಹರ್ಯಾಣದ ನೂತನ ಶಾಸಕರಲ್ಲಿ ಶೇ.93 ರಷ್ಟು ಮಂದಿ ಕೋಟ್ಯಾಧಿಪತಿಗಳು- ಎಡಿಆರ್ ವರದಿ
ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾಗಿರುವ ನೂತನ 90 ಶಾಸಕರ ಪೈಕಿಯಲ್ಲಿ 84 ಮಂದಿ ಕೋಟ್ಯಾಧಿಪತಿಗಳು ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ( ಎಡಿಆರ್ ) ವರದಿಯಲ್ಲಿ ಹೇಳಲಾಗಿದೆ.

ಚಂಡೀಘಡ: ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾಗಿರುವ ನೂತನ 90 ಶಾಸಕರ ಪೈಕಿಯಲ್ಲಿ 84 ಮಂದಿ ಕೋಟ್ಯಾಧಿಪತಿಗಳು ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ( ಎಡಿಆರ್ ) ವರದಿಯಲ್ಲಿ ಹೇಳಲಾಗಿದೆ.
ಇತ್ತೀಚಿಗೆ ಮುಗಿದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 90 ಶಾಸಕರ ಪೈಕಿ 75 ಶಾಸಕರು 1 ಕೋಟಿಗಿಂತಲೂ ಹೆಚ್ಚಿನ ಮೌಲ್ಯದ ತಮ್ಮ ಆಸ್ತಿಪಾಸ್ತಿಯನ್ನು ಘೋಷಿಸಿಕೊಂಡಿದ್ದು, ಕೋಟ್ಯಾಧಿಪತಿಗಳ ಶಾಸಕರ ಸಂಖ್ಯೆಯಲ್ಲಿ ಶೇಕಡ 10 ರಷ್ಟು ಹೆಚ್ಚಳವಾಗಿದೆ ಎಂದು ಎಡಿಆರ್ ವರದಿಯಲ್ಲಿ ತಿಳಿಸಿದೆ.
ಎಡಿಆರ್ ವಿಶ್ಲೇಷಣೆ ಪ್ರಕಾರ 40 ಬಿಜೆಪಿ ಶಾಸಕರ ಪೈಕಿ 37 ಹಾಗೂ 31 ಕಾಂಗ್ರೆಸ್ ಶಾಸಕರ ಪೈಕಿಯಲ್ಲಿ 29 ಮಂದಿ ಶಾಸಕರು ಕೋಟ್ಯಾಧಿಪತಿಗಳಾಗಿದ್ದಾರೆ. ಜೆಜೆಪಿಯ 10 ಶಾಸಕರು 25. 26 ಕೋಟಿ ಮೌಲ್ಯದ ಆಸ್ತಿಪಾಸ್ತಿ ಹೊಂದಿದ್ದಾರೆ. 57 ಶಾಸಕರು 41 ರಿಂದ 50 ವರ್ಷದೊಳಗಿನ ಶಾಸಕರಾಗಿದ್ದರೆ 62 ಶಾಸಕರು ಪದವೀ ಅಥವಾ ಅದಕ್ಕೂ ಮೇಲ್ಪಟ್ಟ ವ್ಯಾಸಂಗ ಮಾಡಿದ್ದಾರೆ.
90 ಶಾಸಕರ ಪೈಕಿ 12 ಮಂದಿ ಶಾಸಕರು ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇವರಲ್ಲಿ ಕಾಂಗ್ರೆಸ್ ಪಕ್ಷದ ನಾಲ್ವರು, ಬಿಜೆಪಿಯ ಇಬ್ಬರು ಹಾಗೂ ಜೆಜೆಪಿಯ ಒಬ್ಬರು ಕ್ರಿಮಿನಲ್ ಕೇಸ್ ಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದಾರೆ ಎಂದು ಎಡಿಆರ್ ವರದಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


