ವಿಧಿ 370 ರದ್ಧತಿ ಬಳಿಕ ಹಿಂಸಾಚಾರ ಸುದ್ದಿ; ಕಾಶ್ಮೀರಕ್ಕೆ ಯೂರೋಪಿಯನ್ ನಿಯೋಗ ಭೇಟಿ
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ವಿಧಿ 370 ಅನ್ನು ರದ್ಧು ಮಾಡಿದ ಬಳಿಕ ಕಣಿವೆ ರಾಜ್ಯದಲ್ಲಿ ಹಿಂಸಾಚಾರ ಉಂಟಾಗಿದೆ ಎಂಬ ಸುದ್ದಿಗಳ ಹರಿದಾಡುತ್ತಿರುವಂತೆಯೇ ಇತ್ತ ಯೂರೋಪಿನ ಜನಪ್ರತಿನಿಧಿಗಳ ನಿಯೋಗವೊಂದು ಕಾಶ್ಮೀರಕ್ಕೆ ಭೇಟಿ ನೀಡಿದೆ.

ನವದೆಹಲಿ: ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ವಿಧಿ 370 ಅನ್ನು ರದ್ಧು ಮಾಡಿದ ಬಳಿಕ ಕಣಿವೆ ರಾಜ್ಯದಲ್ಲಿ ಹಿಂಸಾಚಾರ ಉಂಟಾಗಿದೆ ಎಂಬ ಸುದ್ದಿಗಳ ಹರಿದಾಡುತ್ತಿರುವಂತೆಯೇ ಇತ್ತ ಯೂರೋಪಿನ ಜನಪ್ರತಿನಿಧಿಗಳ ನಿಯೋಗವೊಂದು ಕಾಶ್ಮೀರಕ್ಕೆ ಭೇಟಿ ನೀಡಿದೆ.
ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯ ಅಧ್ಯಯನ ನಡೆಸಲು ಬಂದಿರುವ ಯೂರೋಪ್ ಒಕ್ಕೂಟದ 27 ಮಂದಿ ಸಂಸದರ ತಂಡ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರನ್ನು ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.
ಜಮ್ಮು ಕಾಶ್ಮೀರದ ಈಗಿನ ಸ್ಥಿತಿಗತಿ ಹಾಗೂ ಗಡಿಯಾಚೆಗಿನ ಭಯೋತ್ಪಾದನೆಯಿಂದಾಗಿ ಈ ಪ್ರದೇಶದ ಮೇಲೆ ಆಗಿರುವ ಪರಿಣಾಮಗಳ ಬಗ್ಗೆ ಅಜಿತ್ ದೋವಲ್ ಅವರು ನಿಯೋಗಕ್ಕೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಔತಣಕೂಟದಲ್ಲಿ ಕಾಶ್ಮೀರ ರಾಜಕೀಯ ಮುಖಂಡರೂ ಭಾಗಿ
ಇನ್ನು ಯೂರೋಪಿಯನ್ ನಿಯೋಗಕ್ಕಾಗಿ ಡೊಭಾಲ್ ಏರ್ಪಡಿಸಿದ್ದ ಔತಣಕೂಟದಲ್ಲಿ ಜಮ್ಮು ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿ ಮುಜಪ್ಫರ್ ಬೇಗ್, ಪಿಡಿಪಿಯ ಮಾಜಿ ಮುಖಂಡ ಅಲ್ತಾಫ್ ಬುಖಾರಿ ಹಾಗೂ ಇತರ ಕೆಲವು ನಾಯಕರು ಪಾಲ್ಗೊಂಡಿದ್ದರು.
ಜಮ್ಮು- ಕಾಶ್ಮೀರದ ವಿಶೇಷಾಧಿಕಾರ ರದ್ದತಿಯ ಬಳಿಕ ಇಲ್ಲಿಗೆ ಭೇಟಿ ನೀಡುತ್ತಿರುವ ವಿದೇಶಿ ಪ್ರತಿನಿಧಿಗಳ ಮೊದಲ ತಂಡ ಇದಾಗಿದ್ದು, ಕಣಿವೆಯ ಸ್ಥಿತಿಗತಿಯ ಬಗ್ಗೆ ಜಗತ್ತಿಗೆ ಪಾಕಿಸ್ತಾನವು ನೀಡಿರುವ ಚಿತ್ರಣವನ್ನು ಬದಲಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ ಇಟ್ಟಿರುವ ಮಹತ್ವದ ಹೆಜ್ಜೆ ಎಂದು ಹೇಳಲಾಗುತ್ತಿದೆ.
ಜಮ್ಮು-ಕಾಶ್ಮೀರ ಮತ್ತು ಲಡಾಖ್ಗೆ ಭೇಟಿ ನೀಡುವುದರಿಂದ ಈ ತಂಡಕ್ಕೆ ಅಲ್ಲಿಯ ಧಾರ್ಮಿಕ ಮತ್ತು ಸಾಂಸ್ಕೃತಿಕ ವೈವಿಧ್ಯದ ಸ್ಪಷ್ಟ ತಿಳಿವಳಿಕೆ ಲಭ್ಯವಾಗಲಿದೆ. ಆ ಭಾಗದ ಆಡಳಿತ ಮತ್ತು ಅಭಿವೃದ್ಧಿಯ ಅಗತ್ಯಗಳ ಬಗ್ಗೆಯೂ ಚಿತ್ರಣ ನೀಡಲಿದೆ ಎಂದು ಭೇಟಿಯ ಬಳಿಕ ಪ್ರಧಾನಿ ಕಚೇರಿಯು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


