ದೇಶ

3 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ, ಓರ್ವ ಯೋಧ ಹುತಾತ್ಮ!

ಪಾಕಿಸ್ತಾನ ನಾವು ಉಗ್ರರನ್ನು ಪೋಷಿಸುತ್ತಾ ಬಂದಿಲ್ಲ ಎಂದು ಪಾಪಿಸ್ತಾನ ಹೇಳಿಕೊಂಡೆ ಬರುತ್ತಿದೆ. ಇದೇ ಮಾತನ್ನು ವಿಶ್ವಸಂಸ್ಧೆಯಲ್ಲೂ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೊಂಡು ತಿರುಗುತ್ತಿದ್ದಾರೆ. ಆದರೆ ಜಮ್ಮು ಮತ್ತು ಕಾಶ್ಮೀರದಲ್ಲಿ...

3 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ, ಓರ್ವ ಯೋಧ ಹುತಾತ್ಮ!
ಭಾರತೀಯ ಯೋಧರು
Published On :

ಜಮ್ಮು ಮತ್ತು ಕಾಶ್ಮೀರ: ಪಾಕಿಸ್ತಾನ ನಾವು ಉಗ್ರರನ್ನು ಪೋಷಿಸುತ್ತಾ ಬಂದಿಲ್ಲ ಎಂದು ಪಾಪಿಸ್ತಾನ ಹೇಳಿಕೊಂಡೆ ಬರುತ್ತಿದೆ. ಇದೇ ಮಾತನ್ನು ವಿಶ್ವಸಂಸ್ಧೆಯಲ್ಲೂ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೊಂಡು ತಿರುಗುತ್ತಿದ್ದಾರೆ. ಆದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮಾತ್ರ ಭಾರತೀಯ ಯೋಧರು ಉಗ್ರರನ್ನು ಹೊಡೆದುರುಳಿಸಿ ತಮ್ಮ ಕೆಲಸವನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ. 

ಇಲ್ಲಿನ ಗಂದೇರ್ ಬಾಲ್ ಜಿಲ್ಲೆಯ ನರನಾಗ್ ಬಳಿ ಮೂವರು ಭಯೋತ್ಪಾದಕರನ್ನು ಭಾರತೀಯ ಸೇನೆಯ ಯೋಧರು ಹೊಡೆದುರುಳಿಸಿದ್ದಾರೆ. ಇದೇ ವೇಳೆ ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಬೆಳಗ್ಗೆ ಭಾರತೀಯ ಸೇನಾ ವಾಹನದ ಮೇಲೆ ಉಗ್ರರು ಗ್ರೈನೇಡ್ ದಾಳಿ ನಡೆಸಿದ್ದರು. ಕೂಡಲೇ ಭಾರತೀಯ ಸೇನೆಯ ಯೋಧರು ಉಗ್ರರ ವಿರುದ್ಧ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಪರಾರಿಯಾಗಿದ್ದ ಮೂವರು ಉಗ್ರರು ಮನೆಯೊಂದರಲ್ಲಿ ಅಡಗಿ ಕುಳಿತ್ತಿದ್ದರು. ಇದರ ಜೊತೆಗೆ ಮನೆಯಲ್ಲಿದ್ದವರನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿದ್ದರು. 

ಕೂಡಲೇ ಮನೆಯನ್ನು ಸುತ್ತುವರಿದ ಭಾರತೀಯ ಯೋಧರು ಮೂವರು ಉಗ್ರರನ್ನು ಹತ್ಯೆ ಮಾಡಿದ್ದು ಒತ್ತೆಯಾಳಾಗಿದ್ದ ವೃದ್ಧದನ್ನು ರಕ್ಷಿಸಿದ್ದಾರೆ. ಇದೇ ವೇಳೆ ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಈ ಮೂವರು ಉಗ್ರರು ಭಾರತದವರಲ್ಲಿ ವಿದೇಶಿಯರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.