ದೇಶ

ಮಹಾರಾಷ್ಟ್ರದಲ್ಲಿ ಕೊವಿದ್‍-19 ಪ್ರಕರಣಗಳ ಸಂಖ್ಯೆ 320ಕ್ಕೆ ಏರಿಕೆ, ಒಟ್ಟು 12 ಮಂದಿ ಸಾವು

ಮುಂಬೈನಲ್ಲಿ ಕೊವಿದ್‍ -19 ಸೋಂಕು ಇನ್ನೂ 16 ಜನರಲ್ಲಿ ದೃಢಪಡುವುದರೊಂದಿಗೆ ಮಾರಕ ವೈರಸ್‍ನಿಂದ ಮಹಾರಾಷ್ಟ್ರದಲ್ಲಿ ಬುಧವಾರ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 320 ಕ್ಕೆ ತಲುಪಿದೆ.

ಮಹಾರಾಷ್ಟ್ರದಲ್ಲಿ ಕೊವಿದ್‍-19 ಪ್ರಕರಣಗಳ ಸಂಖ್ಯೆ 320ಕ್ಕೆ ಏರಿಕೆ, ಒಟ್ಟು 12 ಮಂದಿ ಸಾವು
ಸಾಂದರ್ಭಿಕ ಚಿತ್ರ
Published On :

ಪುಣೆ: ಮುಂಬೈನಲ್ಲಿ ಕೊವಿದ್‍ -19 ಸೋಂಕು ಇನ್ನೂ 16 ಜನರಲ್ಲಿ ದೃಢಪಡುವುದರೊಂದಿಗೆ ಮಾರಕ ವೈರಸ್‍ನಿಂದ ಮಹಾರಾಷ್ಟ್ರದಲ್ಲಿ ಬುಧವಾರ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 320 ಕ್ಕೆ ತಲುಪಿದೆ.

ಪುಣೆಯಲ್ಲಿ ಮಹಾಮಾರಿ ಕೊರೋನಾ ವೈರಸ್ ಇಂದು ಇಬ್ಬರು ಬಲಿಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಮಾರಣಾಂತಿಕ ವೈರಸ್ ನಿಂದ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಮುಂಬೈನಲ್ಲಿ ಒಟ್ಟು 169 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾರಾಷ್ಟ್ರ ಇಡೀ ದೇಶದಲ್ಲಿ ಅತಿ ಹೆಚ್ಚು ಕೊವಿಡ್-19 ಪ್ರಕರಣಗಳನ್ನು ಹೊಂದಿದ ರಾಜ್ಯವಾಗಿ ಮುಂದುವರೆದಿದೆ.

ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿರುವ ಜನರ ಮೇಲೆ ಪುಣೆ ನಗರ ಪೊಲೀಸರು ಮತ್ತು ಪಿಂಪ್ರಿ-ಚಿಂಚ್‌ವಾಡ ಪೊಲೀಸ್‍ ಅಧಿಕಾರಿಗಳು ಕ್ರಮ ಜರುಗಿಸಲಾರಂಭಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.