ತೆಲಂಗಾಣದಲ್ಲಿ ಮತ್ತೆ ಮೂವರ ಸಾವು, 30 ಹೊಸ ಪ್ರಕರಣ: ಆತಂಕದಲ್ಲಿ ಜನ
ತೆಲಂಗಾಣದಲ್ಲಿ ಕೊರೊನಾ ಸೋಂಕಿನಿಂದಾಗಿ ಬುಧವಾರ ಮೂವರು ಸಾವಿಗೀಡಾಗಿದ್ದಾರೆ. ಇವರೆಲ್ಲರೂ ಕಳೆದ ತಿಂಗಳು ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದಿದ್ದ ತಬ್ಲೀಗ್ ಜಮಾತ್‌ನ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು.

ಹೈದರಾಬಾದ್ : ತೆಲಂಗಾಣದಲ್ಲಿ ಕೊರೊನಾ ಸೋಂಕಿನಿಂದಾಗಿ ಬುಧವಾರ ಮೂವರು ಸಾವಿಗೀಡಾಗಿದ್ದಾರೆ. ಇವರೆಲ್ಲರೂ ಕಳೆದ ತಿಂಗಳು ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದಿದ್ದ ತಬ್ಲೀಗ್ ಜಮಾತ್‌ನ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು.
ಕೋವಿಡ್–19 ದೃಢಪಟ್ಟ ಮೂವತ್ತು ಹೊಸ ಪ್ರಕರಣಗಳು ತೆಲಂಗಾಣದಲ್ಲಿ ವರದಿಯಾಗಿರುವುದಾಗಿ ಗುರುವಾರ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಕಚೇರಿಯ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸೋಂಕಿನಿಂದಾಗಿ ಈ ಹಿಂದೆ ರಾಜ್ಯದಲ್ಲಿ ಮೃತಪಟ್ಟಿರುವ ಆರು ಮಂದಿ ಸಹ ತಬ್ಲೀಗ್ ಜಮಾತ್‌ನ ಧಾರ್ಮಿಕ ಸಭೆಯಲ್ಲಿ ಭಾಗಿವಹಿಸಿದ್ದರು. ಬುಧವಾರ ಮೂವರು ಸಾವಿಗೀಡಾಗುವ ಮೂಲಕ ಒಟ್ಟು ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಸೋಂಕು ದೃಢಪಟ್ಟಿರುವ ಎಲ್ಲ 30 ಮಂದಿಯೂ ದೆಹಲಿಯ ನಿಜಾಮುದ್ದೀನ್‌ಗೆ ಭೇಟಿ ನೀಡಿದ ಹಿನ್ನೆಲೆ ಹೊಂದಿದ್ದಾರೆ.
ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿ ಪ್ರದೇಶಗಳು ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಕಳೆದ ತಿಂಗಳು ನಿಜಾಮುದ್ದೀನ್‌ನಲ್ಲಿ ನಡೆದ ಸಭೆಯಲ್ಲಿ ಸುಮಾರು 8,500 ಮಂದಿ ಭಾಗಿಯಾಗಿದ್ದು, ಅವರೆಲ್ಲರ ಗುರುತು ಪತ್ತೆ ಮಾಡಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


