ಬ್ರಿಟನ್ ನ ಪ್ರಿನ್ಸ್ ಚಾರ್ಲ್ಸ್ ಕೊರೋನಾ ಸೋಂಕಿಗೆ ಬೆಂಗಳೂರಿನಿಂದ ಆಯುರ್ವೇದದ ಚಿಕಿತ್ಸೆ!
ಇಡೀ ವಿಶ್ವವೇ ಈ ಕೊರೋನಾ ವೈರಸ್ ಗೆ ಚಿಕಿತ್ಸೆ ಏನಪ್ಪಾ ಅಂತ ತಲೆಕೆಡಿಸಿಕೊಂಡಿರಬೇಕಾದರೆ ಬ್ರಿಟನ್ ರಾಜಮನೆತನ ಕೊರೋನಾ ವೈರಸ್ ನಿಂದ ಗುಣಮುಖವಾಗುವುದಕ್ಕೆ ಭಾರತದ ಆಯುರ್ವೇದ ವೈದ್ಯ ಪದ್ಧತಿ ಮೊರೆ ಹೋಗಿದೆ.

ಬ್ರಿಟನ್ ನ ಪ್ರಿನ್ಸ್ ಚಾರ್ಲ್ಸ್ ಗೆ ಕೊರೋನಾ ವೈರಸ್ ಬಂದಿದ್ದು ನಿಮಗೆಲ್ಲರಿಗೂ ತಿಳಿದೇ ಇದೆ. ಹೊಸ ವಿಷಯ ಏನಪ್ಪ ಅಂದರೆ ಇಡೀ ವಿಶ್ವವೇ ಈ ಕೊರೋನಾ ವೈರಸ್ ಗೆ ಚಿಕಿತ್ಸೆ ಏನಪ್ಪಾ ಅಂತ ತಲೆಕೆಡಿಸಿಕೊಂಡಿರಬೇಕಾದರೆ ಬ್ರಿಟನ್ ರಾಜಮನೆತನ ಕೊರೋನಾ ವೈರಸ್ ನಿಂದ ಗುಣಮುಖವಾಗುವುದಕ್ಕೆ ಭಾರತದ ಆಯುರ್ವೇದ ವೈದ್ಯ ಪದ್ಧತಿ ಮೊರೆ ಹೋಗಿದೆ.
ಕೊರೋನಾ ಪೀಡಿತ ಪ್ರಿನ್ಸ್ ಚಾರ್ಲ್ಸ್ ಗೆ ಬೆಂಗಳೂರು ಮೂಲದ ವೈದ್ಯರು ಇಲ್ಲಿಂದಲೇ ಚಿಕಿತ್ಸೆ ನೀಡಿದ್ದಾರೆ ಎಂಬುದು ಮತ್ತೊಂದು ವಿಶೇಷದ ಸಂಗತಿ!
ಕೇಂದ್ರ ಆಯುಷ್ ಸಚಿವ ಶ್ರೀಪಾನ್ ನಾಯ್ಕ್ ಈ ವಿಷಯವನ್ನು ಬಹಿರಂಗಪಡಿಸಿದ್ದು, ಬೆಂಗಳೂರಿನ ಆಯುರ್ವೇದ ವೈದ್ಯರೊಬ್ಬರು ತಮ್ಮ ವೈದ್ಯ ಪದ್ಧತಿಯಿಂದ ಬ್ರಿಟನ್ ನ ಪ್ರಿನ್ಸ್ ಚಾರ್ಲ್ಸ್ ಗೆ ಔಷಧ ಸೂಚಿಸಿ ಅವರು ಗುಣಮುಖರಾಗಿದ್ದಾರೆಂದು ಹೇಳಿರುವುದನ್ನು ಹಂಚಿಕೊಂಡಿದ್ದಾರೆ.
ಈ ಮೂಲಕ ಆಯುರ್ವೇದ ಹಾಗೂ ಹೋಮಿಯೋಪತಿಯಲ್ಲಿ ಕೊರೋನಾ ವೈರಸ್ ಗೆ ಚಿಕಿತ್ಸೆ ಇದೆ ಎಂದು ಶ್ರೀಪಾದ್ ನಾಯ್ಕ್ ಹೇಳಿದ್ದಾರೆ. ಬ್ರಿಟನ್ ನ ಪ್ರಿನ್ಸ್ ಚಾರ್ಲ್ಸ್ ಗೆ ಆಯುರ್ವೇದ ಔಷಧ ನೀಡಿರುವ ವೈದ್ಯ ಐಸಾಕ್ ಮಥಾಯ್ ಅವರು ಸೌಖ್ಯ ಎಂಬ ಆಯುರ್ವೇದ ರೆಸಾರ್ಟ್ ನಡೆಸುತ್ತಿದ್ದಾರೆ.
ಪ್ರಿನ್ಸ್ ಚಾರ್ಲ್ಸ್ ಗೆ ನೀಡಲಾಗಿರುವ ಚಿಕಿತ್ಸೆಯ ವಿವರಗಳನ್ನು ಡಾ. ಐಸಾಕ್ ಮಥಾಯ್ ಅವರಿಂದ ಪಡೆದುಕೊಳ್ಳಲಾಗುತ್ತಿದೆ. ಸಮಗ್ರ ಅಧ್ಯಯನ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ಶ್ರೀಪಾದ್ ನಾಯ್ಕ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


