ಕೊರೋನಾ ವೈರಸ್ ಎಫೆಕ್ಟ್: ಉದ್ಧವ್ ಠಾಕ್ರೆ ಶಾಸಕ ಚುನಾವಣೆ ವಿಳಂಬ?
ಕೊರೋನಾ ವೈರಸ್ ಭೀತಿಯಿಂದಾಗಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಶಾಸಕ ಸ್ಥಾನದ ಚುನಾವಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ.

ಮುಂಬಯಿ: ಕೊರೋನಾ ವೈರಸ್ ಭೀತಿಯಿಂದಾಗಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಶಾಸಕ ಸ್ಥಾನದ ಚುನಾವಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ.
ಶಿವಸೇನೆ, ಕಾಂಗ್ರೆಸ್, ಎನ್‌ಸಿಪಿ ಮೈತ್ರಿಕೂಟ ‘ಮಹಾ ವಿಕಾಸ ಅಘಾಡಿ’ ಸರಕಾರದ ಮುಖ್ಯಮಂತ್ರಿಯಾಗಿ ಉದ್ಧವ್ ಅವರು 2019ರ ನ. 28ರಂದು ಪ್ರಮಾಣ ವಚನ ಸ್ವೀಕರಿಸಿದ್ದರು.
ಸಂವಿಧಾನದ 164 (4) ಪರಿಚ್ಛೇದದ ಪ್ರಕಾರ, ಮುಖ್ಯಮಂತ್ರಿ ಅಥವಾ ಸಚಿವರಾದವರು ಪ್ರಮಾಣ ವಚನ ಸ್ವೀಕರಿಸಿದ ದಿನದಿಂದ ಆರು ತಿಂಗಳ ಒಳಗೆ ಶಾಸನಸಭೆಯ ಸದಸ್ಯರಾಗಿ ಆಯ್ಕೆಯಾಗಬೇಕು.
ಹಾಲಿ ಯಾವುದೇ ಸದನದ ಸದಸ್ಯರಲ್ಲದ ಉದ್ಧವ್ ಅವರು ಸಿಎಂ ಹುದ್ದೆಯಲ್ಲಿ ಮುಂದುವರಿಯಲು ಮೇ 28ರ ಒಳಗಾಗಿ ವಿಧಾನಸಭೆ ಅಥವಾ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಬೇಕಾದ ಅವಶ್ಯಕತೆಯಿದೆ.
ಮಹಾರಾಷ್ಟ್ರ ವಿಧಾನ ಪರಿಷತ್‌ನ 9 ಸ್ಥಾನಗಳು ಏ.24ರಂದು ತೆರವಾಗಲಿವೆ. ಹೀಗಾಗಿ ಮೇಲ್ಮನೆಗೆ ಆಯ್ಕೆಯಾಗಬಹುದು ಎನ್ನುವುದು ಠಾಕ್ರೆ ಲೆಕ್ಕಾಚಾರವಾಗಿತ್ತು. ಆದರೆ ಚುನಾವಣೆ ಆಯೋಗವು ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಇದುವರೆಗೆ ಪರಿಷತ್ ಚುನಾವಣೆ ದಿನಾಂಕ ಪ್ರಕಟಿಸಿಲ್ಲ.
ಒಂದೊಮ್ಮೆ ಆರು ತಿಂಗಳ ಒಳಗಾಗಿ ಶಾಸನಸಭೆ ಸದಸ್ಯರಾಗಿ ಆಯ್ಕೆಯಾಗದಿದ್ದರೆ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಬೇಕಾಗುತ್ತದೆ. ಉದ್ಧವ್ ಠಾಕ್ರೆ ಆರು ತಿಂಗಳ ಮುಖ್ಯಮಂತ್ರಿ ಅವಧಿ ಮೇ 28ಕ್ಕೆ ಕೊನೆಗೊಳ್ಳುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


