ದೇಶ

ದೆಹಲಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಮತ್ತಿಬ್ಬರು ವೈದ್ಯಕೀಯ ಸಿಬ್ಬಂದಿಗಳಲ್ಲಿ ಕೊರೋನಾ ಪತ್ತೆ!

ರಾಷ್ಟ್ರ ರಾಜಧಾನಿ ದೆಹಲಿಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಮತ್ತಿಬ್ಬರು ವೈದ್ಯಕೀಯ ಸಿಬ್ಬಂದಿಗಳನ್ನು ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳು ತಿಳಿಸಿವೆ.

ದೆಹಲಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಮತ್ತಿಬ್ಬರು ವೈದ್ಯಕೀಯ ಸಿಬ್ಬಂದಿಗಳಲ್ಲಿ ಕೊರೋನಾ ಪತ್ತೆ!
Published On :

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಮತ್ತಿಬ್ಬರು ವೈದ್ಯಕೀಯ ಸಿಬ್ಬಂದಿಗಳನ್ನು ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳು ತಿಳಿಸಿವೆ. 

ಈ ಹಿಂದೆ ವೈದ್ಯರೊಬ್ಬರಲ್ಲಿ ವೈರಸ್ ದೃಢಪಟ್ಟಿತ್ತು. ಇದಾದ ಬಳಿಕ ವೈದ್ಯರೊಂದಿಗೆ ಸಂಪರ್ಕ ಹೊಂದಿದ್ದ ನಾಲ್ವರು ಸಿಬ್ಬಂದಿಗಳಲ್ಲೂ ವೈರಸ್ ಕಂಡು ಬಂದಿತ್ತು. ಇದೀಗ ಮತ್ತಿಬ್ಬರು ವೈದ್ಯಕೀಯ ಸಿಬ್ಬಂದಿಗಳಲ್ಲಿ ವೈರಸ್ ದೃಢಪಟ್ಟಿರುವುದು ಆಂತಕ ಹೆಚ್ಚಾಗುವಂತೆ ಮಾಡಿದೆ.

ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ರಾಷ್ಟ್ರ ರಾಜಧಾನಿಯಲ್ಲಿ 435 ಮ ಂದಿಯಲ್ಲಿ ವೈರಸ್ ಪತ್ತೆಯಾಗಿದೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.