ದೇಶ

9 ಉಗ್ರರನ್ನು ಹೊಡೆದುರುಳಿಸಿದ್ದ ಭಾರತೀಯ ಸೇನೆಯ ಮೂವರು ಯೋಧರು ಹುತಾತ್ಮ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ 9 ಉಗ್ರರನ್ನು ಹೊಡೆದುರುಳಿಸಿದ್ದು ಇದೇ ಕಾರ್ಯಾಚರಣೆ ವೇಳೆ ಮೂವರು ಯೋಧರು ಹುತಾತ್ಮರಾಗಿದ್ದಾರೆ.

9 ಉಗ್ರರನ್ನು ಹೊಡೆದುರುಳಿಸಿದ್ದ ಭಾರತೀಯ ಸೇನೆಯ ಮೂವರು ಯೋಧರು ಹುತಾತ್ಮ
ಭಾರತೀಯ ಸೇನೆ
Published On :

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ 9 ಉಗ್ರರನ್ನು ಹೊಡೆದುರುಳಿಸಿದ್ದು ಇದೇ ಕಾರ್ಯಾಚರಣೆ ವೇಳೆ ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಮಾರಕ ಕೊರೋನಾ ವೈರಸ್ ಸೋಂಕು ಪ್ರಸರಣೆಯಿಂದಾಗಿ ಲಾಕ್ ಡೌನ್ ನಿಂದಾಗಿ ಇಡೀ ದೇಶವೇ ಆತಂಕದಲ್ಲಿದ್ದು, ಇದೇ ಸಂದರ್ಭದಲ್ಲಿ ಅತ್ತ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಬಾಲ ಬಿಚ್ಚಲು ಯತ್ನಿಸಿದ 9 ಮಂದಿ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿತ್ತು.

ದಕ್ಷಿಣ ಕಾಶ್ಮೀರದ ಬಾಟ್ಪುರ್ ದಲ್ಲಿ ನಿನ್ನೆ 4 ಮಂದಿ ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಇದರ ಬೆನ್ನಲ್ಲೇ ಇಂದು ಎಲ್ಒಸಿಯ ಕೆರಾನ್ ಸೆಕ್ಟರ್ ನಲ್ಲಿ ಮತ್ತೆ 5 ಮಂದಿ ಉಗ್ರರನ್ನು ಹೊಡೆದುರುಳಿಸಲಾಗಿತ್ತು. 

ಇನ್ನು ಕಾರ್ಯಾಚರಣೆ ವೇಳೆ ಹಲವು ಯೋಧರು ಗಂಭೀರವಾಗಿ ಗಾಯಗೊಂಡಿದ್ದು ಇದೀಗ ಮೂವರು ಹುತಾತ್ಮರಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.