ದೇಶ

ಜಮ್ಮು ಮತ್ತು ಕಾಶ್ಮೀರ: 24 ಗಂಟೆಗಳ ಅವಧಿಯಲ್ಲಿ 9 ಉಗ್ರರ ಹೊಡೆದುರುಳಿಸಿದ ಸೇನೆ, ಓರ್ವ ಯೋಧ ಹುತಾತ್ಮ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ 9 ಉಗ್ರರನ್ನು ಹೊಡೆದುರುಳಿಸಿದೆ.

ಜಮ್ಮು ಮತ್ತು ಕಾಶ್ಮೀರ: 24 ಗಂಟೆಗಳ ಅವಧಿಯಲ್ಲಿ 9 ಉಗ್ರರ ಹೊಡೆದುರುಳಿಸಿದ ಸೇನೆ, ಓರ್ವ ಯೋಧ ಹುತಾತ್ಮ
ಸಂಗ್ರಹ ಚಿತ್ರ
Published On :

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ 9 ಉಗ್ರರನ್ನು ಹೊಡೆದುರುಳಿಸಿದೆ.

ಮಾರಕ ಕೊರೋನಾ ವೈರಸ್ ಸೋಂಕು ಪ್ರಸರಣೆಯಿಂದಾಗಿ ಲಾಕ್ ಡೌನ್ ನಿಂದಾಗಿ ಇಡೀ ದೇಶವೇ ಆತಂಕದಲ್ಲಿದ್ದು, ಇದೇ ಸಂದರ್ಭದಲ್ಲಿ ಅತ್ತ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಬಾಲ ಬಿಚ್ಚಲು ಯತ್ನಿಸಿದ 9 ಮಂದಿ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. 

ದಕ್ಷಿಣ ಕಾಶ್ಮೀರದ ಬಾಟ್ಪುರ್ ದಲ್ಲಿ ನಿನ್ನೆ 4 ಮಂದಿ ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಇದರ ಬೆನ್ನಲ್ಲೇ ಇಂದು ಎಲ್ಒಸಿಯ ಕೆರಾನ್ ಸೆಕ್ಟರ್ ನಲ್ಲಿ ಮತ್ತೆ 5 ಮಂದಿ ಉಗ್ರರನ್ನು ಹೊಡೆದುರುಳಿಸಲಾಗಿದೆ.

ಓರ್ವ ಯೋಧ ಹುತಾತ್ಮ, ನಾಲ್ಕು ಯೋಧರಿಗೆ ಗಂಭೀರ ಗಾಯ
ಇನ್ನು ಘಟನೆಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದು, ನಾಲ್ಕು ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಸೈನಿಕರನ್ನು ಸೇನಾಸ್ಪತ್ರೆಗೆ ದಾಖಲು ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.