ದೆಹಲಿ: ಕೊರೋನಾ ಶಂಕಿತ ವ್ಯಕ್ತಿ ಆತ್ಮಹತ್ಯೆಗೆ ಯತ್ನ
ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೋನಾ ಶಂಕಿತ ವ್ಯಕ್ತಿಯೊಬ್ಬ ಆಸ್ಪತ್ರೆಯ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ನವದೆಹಲಿ: ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೋನಾ ಶಂಕಿತ ವ್ಯಕ್ತಿಯೊಬ್ಬ ಆಸ್ಪತ್ರೆಯ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಏಮ್ಸ್ ಜೈ ಪ್ರಕಾಶ್ ನಾರಾಯಣ ಅಪೆಕ್ಸ್ ಟ್ರಾಮಾ ಕೇಂದ್ರದ ಮೂರನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆಂದು ತಿಳಿದುಬಂದಿದೆ.
ಮಹಡಿಯಿಂದ ಬಿದ್ದ ಪರಿಣಾಮ ವ್ಯಕ್ತಿಯ ಕಾಲಿನ ಮೂಳೆ ಮುರಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ವರದಿಗಳು ತಿಳಿಸಿವೆ. ಕೊರೋನಾ ವೈರಸ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ವ್ಯಕ್ತಿಯ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಗಾಗಿ ವೈದ್ಯರು ಕಾಯುತ್ತಿದ್ದಾರೆನ್ನಲಾಗುತ್ತಿದೆ. ಇದೀಗ ವ್ಯಕ್ತಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


