ಕೊವಿಡ್-19: ದೇಶದಲ್ಲಿ ಶೇ.76 ರಷ್ಟು ಪುರುಷರಿಗೆ ಸೋಂಕು, 25 ಸಾವಿರ ತಬ್ಲಿಘಿ ಸದಸ್ಯರ, ಸಂಪರ್ಕದಲ್ಲಿದ್ದರಿಗೆ ಕ್ವಾರಂಟೈನ್
ಮಹಾಮಾರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶಾದ್ಯಂತ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 693 ಹೊಸ ಪ್ರಕರಣಗಳು ಪತ್ತೆಯಾಗಿವೆ.

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶಾದ್ಯಂತ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 693 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ 4,067ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ.
ಈ ಸಂಬಂಧ ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರವಾಲ್ ಅವರು, ಭಾನುವಾರ ಸಂಜೆಯಿಂದ ಸಕ್ರಿಯ ಪ್ರಕರಣಗಳು 693 ರಷ್ಟು ಏರಿಕೆಯಾಗಿದ್ದು, ಒಟ್ಟು ಸಂಖ್ಯೆ ಇದುವರೆಗೆ 4,067 ರಷ್ಟಿದೆ. ಸಾವಿನ ಸಂಖ್ಯೆ 109ಕ್ಕೆ ಏರಿದ್ದು, ಭಾನುವಾರ ಸಂಜೆಯಿಂದ 23 ಸಾವುಗಳು ವರದಿಯಾಗಿವೆ ಎಂದು ಹೇಳಿದ್ದಾರೆ.
ದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ ಪೈಕಿ ಶೇ. 76ರಷ್ಟು ಪುರುಷರು ಹಾಗೂ ಶೇ. 24ರಷ್ಟು ಮಹಿಳೆಯರಿದ್ದಾರೆ ಎಂದು ಅಗರವಾಲ್ ಅವರು ತಿಳಿಸಿದ್ದಾರೆ.
ನಿನ್ನೆ ಸಂಜೆಯಿಂದ 17ಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದು, ದೇಶಾದ್ಯಂತ ಸೋಂಕಿತ ಒಟ್ಟು 291 ಮಂದಿ ಗುಣಮುಖರಾಗಿದ್ದಾರೆ. ಒಂದೆರಡು ದಿನಗಳಿಂದ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಮುಂದುವರಿದಿದ್ದು, 780 ಸೋಂಕಿತ ಪ್ರಕರಣಗಳು ಮತ್ತು 45 ಸಾವುಗಳ ವರದಿಯೊಂದಿಗೆ ಮಹಾರಾಷ್ಟ್ರ ದೇಶದಲ್ಲೇ ಹೆಚ್ಚು ಬಾಧಿತ ರಾಜ್ಯವೆನಿಸಿದೆ. ನಂತರದ ಸ್ಥಾನದಲ್ಲಿರುವ ತಮಿಳುನಾಡಿನಲ್ಲಿ ದೃಢಪಟ್ಟ ಪ್ರಕರಣಗಳ ಸಂಖ್ಯೆ 621ಕ್ಕೆ ಏರಿದ್ದು, ಐವರು ಸಾವನ್ನಪ್ಪಿದ್ದಾರೆ.
ಈ ಮಧ್ಯ, ಸುಮಾರು 25 ಸಾವಿರ ತಬ್ಲಿಘಿ ಜಮಾತ್ ಕಾರ್ಯಕರ್ತರು ಮತ್ತು ಅವರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ನಲ್ಲಿಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


