ಉತ್ತರ ಪ್ರದೇಶ: ಕೆಮ್ಮು, ಶೀತ ಕಾಣಿಸಿಕೊಂಡ ಯುವಕ ಆತ್ಮಹತ್ಯೆ! ಕೊರೋನಾ ಶಂಕೆ
ಕೆಮ್ಮು, ಶೀತದಿಂದ ಬಳಲುತ್ತಿದ್ದ 35 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಾಂದಾ ಜಿಲ್ಲೆಯಲ್ಲಿ ನಡೆದಿದೆ

ಬಾಂದಾ: ಕೆಮ್ಮು, ಶೀತದಿಂದ ಬಳಲುತ್ತಿದ್ದ 35 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಾಂದಾ ಜಿಲ್ಲೆಯಲ್ಲಿ ನಡೆದಿದೆ
ಜಿಲ್ಲೆಯ ಜಮಲ್ ಪುರ ಗ್ರಾಮದಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊರೋನಾವೈರಸ್ ಭೀತಿಯಿಂದ ಆತ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಮೃತನನ್ನು ರಾಜೇಂದ್ರ ಎಂದು ಗುರುತಿಸಲಾಗಿದೆ. ಈತನಿಗೆ ಕೆಮ್ಮು, ಶೀತ ಕಾಣಿಸಿಕೊಂಡ ಬಳಿಕ ಕೆಲ ಗ್ರಾಮಸ್ಥರು ಕೊರೋನಾ ಸೋಂಕು ತಗುಲಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ. ನಂತರ ಆತ ಸ್ವಯಂ ಪ್ರೇರಣೆಯಿಂದ ಕೊಠಡಿಯೊಂದರಲ್ಲಿ ಪ್ರತ್ಯೇಕವಾಗಿದ್ದ. ಇದೇ ಕಾರಣದಿಂದ ಆತ ಮೃತಪಟ್ಟಿರಬಹುದೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚಿಕಿತ್ಸೆಗಾಗಿ ಆ ಯುವಕ ಯಾವುದೇ ಸರ್ಕಾರಿ ಆಸ್ಪತ್ರೆಗೆ ಹೋಗಿಲ್ಲ, ದೆಹಲಿಯಲ್ಲಿ ಕಟ್ಟಡ ನಿರ್ಮಾಣ ಕೆಲಸಗಾರ ನಾಗಿದ್ದ ರಾಜೇಂದ್ರ ಮಾರ್ಚ್ ತಿಂಗಳ ಮಧ್ಯದಲ್ಲಿ ಸ್ವಗ್ರಾಮಕ್ಕೆ ಹಿಂತಿರುಗಿದ್ದಾನೆ. ಆಗಿನಿಂದಲೂ ಆತ ಶೀತ, ಕೆಮ್ಮು ಹಾಗೂ ಜ್ವರದಿಂದ ಬಳಲುತ್ತಿದ್ದ ಬಗ್ಗೆ ವರದಿಯಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ಸಂತೋಷ್ ಕುಮಾರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


