24 ಗಂಟೆಗಳಲ್ಲಿ 704 ಹೊಸ ಕೊರೋನಾ ಪ್ರಕರಣಗಳು, 111 ಸಾವು, ಒಟ್ಟಾರೆ ಸೋಂಕಿತರ ಸಂಖ್ಯೆ 4,281 ಕ್ಕೆ ಏರಿಕೆ
ದೇಶಾದ್ಯಂತ ಕೊರೋನಾ ವೈರಸ್ ಹರಡುವಿಕೆಯ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಒಂದೇ ದಿನದಲ್ಲಿ 704 ಹೊಸ ಪ್ರಕರಣಗಳು ವರದಿಯಾಗಿದ್ದು, ಸಾವಿನ ಸಂಖ್ಯೆ 111ಕ್ಕೆ ಏರಿಕೆಯಾಗಿದೆ.

ನವದೆಹಲಿ: ದೇಶಾದ್ಯಂತ ಕೊರೋನಾ ವೈರಸ್ ಹರಡುವಿಕೆಯ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಒಂದೇ ದಿನದಲ್ಲಿ 704 ಹೊಸ ಪ್ರಕರಣಗಳು ವರದಿಯಾಗಿದ್ದು, ಸಾವಿನ ಸಂಖ್ಯೆ 111ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಒಟ್ಟಾರೆ ಸೋಂಕಿತರ ಸಂಖ್ಯೆ 4,281 ಕ್ಕೆ ಏರಿಕೆಯಾಗಿದೆ. ಈ ಪೈಕಿ 318 ಜನರು ಗುಣಮುಖರಾಗಿದ್ದು, 3,851 ಸೋಂಕಿತ ಪ್ರಕರಾಣಗಳು ಸಕ್ರಿಯವಾಗಿವೆ.
ಕಳೆದ 24 ಗಂಟೆಗಳಲ್ಲಿ 28 ಸಾವುಗಳು ಸಂಭವಿಸಿದ್ದು, ಈ ಪೈಕಿ 21 ಸಾವು ಮಹಾರಾಷ್ಟ್ರದಲ್ಲಿ ಸಂಭವಿಸಿದ್ದರೆ, ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ತಲಾ ಒಂದೊಂದು, ಪಂಜಾಬ್, ಗುಜರಾತ್, ಉತ್ತರ ಪ್ರದೇಶಗಳಲ್ಲಿ ಒಂದೊಂದು ಸಾವು ಸಂಭವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


