ಭಾರತದಲ್ಲಿ 4500 ಗಡಿಯತ್ತ ಸೋಂಕಿತರ ಸಂಖ್ಯೆ: 1 ಲಕ್ಷ ದೆಹಲಿ ನಿವಾಸಿಗಳ ಪರೀಕ್ಷೆಗೊಳಪಡಿಸಲು ಕೇಜ್ರಿವಾಲ್ ಆದೇಶ
ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಸೋಂಕಿತರ ಸಂಖ್ಯೆ 4500ಕ್ಕೆ ಏರಿಕೆಯಾಗಿದೆ. ಈ ನಡುವಲ್ಲೇ. ದೆಹಲಿಯ 1 ಲಕ್ಷ ಜನರನ್ನು ಪರೀಕ್ಷೆಗೊಳಪಡಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ ಆದೇಶಿಸಿದ್ದಾರೆ.

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಸೋಂಕಿತರ ಸಂಖ್ಯೆ 4500ಕ್ಕೆ ಏರಿಕೆಯಾಗಿದೆ. ಈ ನಡುವಲ್ಲೇ. ದೆಹಲಿಯ 1 ಲಕ್ಷ ಜನರನ್ನು ಪರೀಕ್ಷೆಗೊಳಪಡಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ ಆದೇಶಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಈಗಾಗಲೇ 50,000 ಟೆಸ್ಟ್ ಕಿಟ್ ಗಳಿಗೆ ಆರ್ಡರ್ ಮಾಡಲಾಗಿದ್ದು, ಶುಕ್ರವಾರ ಆ ಕಿಟ್ ಗಳು ಕೈ ಸೇರಲಿವೆ. ಅಲ್ಲದೆ, 1 ಲಕ್ಷ ಜನರನ್ನು ಶೀಘ್ರಗತಿಯಲ್ಲಿ ಪರೀಕ್ಷೆಗೊಳಪಡಿಸುವಂತೆಯೂ ಆದೇಶ ನೀಡಲಾಗಿದೆ. ಹಾಟ್ ಸ್ಪಾಟ್ ಗಳಲ್ಲಿರುವ ಜನರನ್ನು ಪದೇ ಪದೇ ಪರೀಕ್ಷೆಗೊಳಪಡಿಸಲಾಗುತ್ತದೆ. ವಿವರಣಾತ್ಮಕ ಪರೀಕ್ಷೆಗಳನ್ನೂ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ವೈರಸ್ ನಿಯಂತ್ರಿಸಲು ನಮ್ಮ ಸರ್ಕಾರ 5 ಪ್ರಮುಖ ಕ್ರಮಗಳನ್ನು ಜಾರಿಗೆ ತರಲಿದೆ. ಸರ್ಕಾರದ ಕ್ರಮಗಳನ್ನು 5 ಟಿಗಳ ಯೋಜನೆ ಎಂದು ಕೇಜ್ರಿವಾಲ್ ತಿಳಿಸಿದ್ದು, ಪರೀಕ್ಷೆ ಮಾಡುವುದು, ರೋಗ ಪತ್ತೆ ಹಚ್ಚುವುದು, ಚಿಕಿತ್ಸೆ ನೀಡುವುದು, ತಂಡವಾಗಿ ಕೆಲಸ ಮಾಡುವುದು, ನಿಗಾವಹಿಸುವುದೇ 5 ಟಿ ಸೂತ್ರಗಳಾಗಿವೆ ಎಂದಿದ್ದಾರೆ.
ತಜ್ಞರೊಂದಿಗೆ ಸಮಾಲೋಚನೆ ನಡೆಸಿ, ಈ ಯೋಜನೆಯನ್ನು ಕಾರ್ಯರೂಪಕ್ಕೆ ತರುತ್ತೇವೆ. ದೆಹಲಿಗೆ 27000 ಪಿಪಿಇ ಕಿಟ್ ಒದಗಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


