ಏಪ್ರಿಲ್ 14ರ ನಂತರ ಲಾಕ್ ಡೌನ್ ಏಕಕಾಲಕ್ಕೆ ತೆರವುಗೊಳಿಸುವುದಿಲ್ಲ: ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ
ಮಹಾಮಾರಿ ಕೊರೋನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿದ್ದು, ಕೊವಿಡ್-19 ಕಟ್ಟಿ ಹಾಕುವುದಕ್ಕಾಗಿ ಜಾರಿಗೊಳಿಸಲಾಗಿರುವ 21 ದಿನಗಳ ಲಾಕ್ ಡೌನ್ ಅನ್ನು ಏಪ್ರಿಲ್ 14ರ ನಂತರ ಏಕಕಾಲಕ್ಕೆ ತೆರವುಗೊಳಿಸುವುದಿಲ್ಲ ಎಂದು.....

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿದ್ದು, ಕೊವಿಡ್-19 ಕಟ್ಟಿ ಹಾಕುವುದಕ್ಕಾಗಿ ಜಾರಿಗೊಳಿಸಲಾಗಿರುವ 21 ದಿನಗಳ ಲಾಕ್ ಡೌನ್ ಅನ್ನು ಏಪ್ರಿಲ್ 14ರ ನಂತರ ಏಕಕಾಲಕ್ಕೆ ತೆರವುಗೊಳಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಹೇಳಿದ್ದಾರೆ.
ದೇಶದಲ್ಲಿ ಲಾಕ್ ಡೌನ್ ಘೋಷಿಸಿದ ನಂತರ ಇಂದು ಮೊದಲ ಬಾರಿಗೆ ಸರ್ವಪಕ್ಷಗಳ ಸಂಸದರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಮೋದಿ, ಲಾಕ್ಡೌನ್ ಮಾಡಿದ್ದರೂ ಕೊರೋನಾ ಸೋಂಕು ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ಲಾಕ್ಡೌನ್ ಏಪ್ರಿಲ್ 14ರ ನಂತರವೂ ಮುಂದುವರೆಸುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಏಪ್ರಿಲ್ 14 ರ ನಂತರ ಲಾಕ್ಡೌನ್ ವಿಸ್ತರಣೆ ಮಾಡಲಾಗುತ್ತದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಮೋದಿ, ಏಕಕಾಲಕ್ಕೆ ಲಾಕ್ ಡೌನ್ ಅನ್ನು ತೆರವುಗೊಳಿಸುವುದಿಲ್ಲ. ಈ ಬಗ್ಗೆ ರಾಜ್ಯಗಳ ಎಲ್ಲಾ ಸಿಎಂಗಳ ಜೊತೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆದರೆ, ಕಠಿಣ ನಿರ್ಧಾರವನ್ನು ಕೈಗೊಳ್ಳಬೇಕಾಗುತ್ತದೆ ಎಂದು ಸಂಸದರಿಗೆ ತಿಳಿಸಿದ್ದಾರೆ.
ಇನ್ನೂ ಸರ್ವಪಕ್ಷ ಸಭೆಯ ಬಳಿಕ ಪಿಟಿಐಗೆ ಪ್ರತಿಕ್ರಿಯಿಸಿದ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಲಾಕ್ಡೌನ್ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.
ಏಪ್ರಿಲ್ 14ರ ನಂತರ ಲಾಕ್ ಡೌನ್ ಅನ್ನು ಒಂದೇ ಬಾರಿಗೆ ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರುವುದಾಗಿ ಸಭೆಯ ಬಳಿಕ ಬಿಜು ಜನತಾ ದಳದ ಸಂಸದ ಪಿನಾಕಿ ಮಿಶ್ರಾ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


