ಹೈಡ್ರೋಕ್ಸಿಕ್ಲೋರೊಕ್ವಿನ್ ಗಾಗಿ ಭಾರತಕ್ಕೆ ಮನವಿ ಮಾಡಲು ರಾಮಾಯಣವನ್ನು ಉಲ್ಲೇಖಿಸಿದ ಬ್ರೆಜಿಲ್ ನ ಅಧ್ಯಕ್ಷ!
ಕೊರೋನಾ ವೈರಸ್ ಸೋಂಕಿತರನ್ನು ಗುಣಪಡಿಸುವುದಕ್ಕೆ ತಾತ್ಕಾಲಿಕವಾಗಿ ಹೈಡ್ರೋಕ್ಸಿಕ್ಲೋರೊಕ್ವಿನ್ ಔಷಧ ಬಳಕೆಯಾಗುತ್ತಿದೆ. ಈ ಔಷಧಕ್ಕಾಗಿ ಹೆಚ್ಚಿನ ರಾಷ್ಟ್ರಗಳು ಭಾರತವನ್ನೇ ಅವಲಂಬಿಸಿದ್ದು, ರಫ್ತು ಮಾಡಬೇಕಾಗಿ ಮನವಿ ಮಾಡಿಕೊಳ್ಳುತ್ತಿವೆ.

ನವದೆಹಲಿ: ಕೊರೋನಾ ವೈರಸ್ ಸೋಂಕಿತರನ್ನು ಗುಣಪಡಿಸುವುದಕ್ಕೆ ತಾತ್ಕಾಲಿಕವಾಗಿ ಹೈಡ್ರೋಕ್ಸಿಕ್ಲೋರೊಕ್ವಿನ್ ಔಷಧ ಬಳಕೆಯಾಗುತ್ತಿದೆ. ಈ ಔಷಧಕ್ಕಾಗಿ ಹೆಚ್ಚಿನ ರಾಷ್ಟ್ರಗಳು ಭಾರತವನ್ನೇ ಅವಲಂಬಿಸಿದ್ದು, ರಫ್ತು ಮಾಡಬೇಕಾಗಿ ಮನವಿ ಮಾಡಿಕೊಳ್ಳುತ್ತಿವೆ.
ಈ ಪರಿಸ್ಥಿತಿಯಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಭಾರತಕ್ಕೆ ಹೈಡ್ರೋಕ್ಸಿಕ್ಲೋರೊಕ್ವಿನ್ ಗಾಗಿ ಮನವಿ ಮಾಡಿ ಬರೆದಿರುವ ಪತ್ರವೊಂದು ಗಮನ ಸೆಳೆದಿದೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದಿರುವ ಪತ್ರದಲ್ಲಿ ಬೋಲ್ಸನಾರೊ ರಾಮಾಯಣ ಘಟನೆ ಉಲ್ಲೇಖಿಸಿದ್ದು, ರಾಮನ ಸಹೋದರ ಲಕ್ಷ್ಮಣನನ್ನು ಬದುಕಿಸಲು ಹನುಮಂತ ಹಿಮಾಲಯದಿಂದ ಸಂಜೀವಿನಿ ಔಷಧ ತಂದ, ಜೀಸಸ್ ಅನಾರೋಗ್ಯ ಎದುರಿಸುತ್ತಿದ್ದವರನ್ನು ಗುಣಪಡಿಸಿ ಬಾರ್ಟಿಮಿಯುಗೆ ಕಣ್ಣು ಕಾಣುವಂತೆ ಮಾಡಿದ. ಹಾಗೆಯೇ ಭಾರತ ಮತ್ತು ಬ್ರೆಜಿಲ್ ಜೊತೆಗೂಡಿ ಎಲ್ಲಾ ಜನರಿಗೋಸ್ಕರ ಜಾಗತಿಕವಾಗಿ ಬಿಕ್ಕಟ್ಟನ್ನು ನಿವಾರಿಸಲು ಶ್ರಮಿಸುತ್ತಿವೆ ಎಂದು ಹೇಳಿದ್ದಾರೆ.
ಬ್ರೆಜಿಲ್ ನಲ್ಲಿ ಈವರೆಗೂ 14,000 ಕೊರೋನಾ ಪ್ರಕರಣಗಳು ವರದಿಯಾಗಿದ್ದು 688 ಸಾವುಗಳು ಸಂಭವಿಸಿವೆ. ಭಾರತ ಮಾ.26 ರಿಂದ ಹೈಡ್ರೋಕ್ಸಿಕ್ಲೋರೊಕ್ವಿನ್ ಔಷಧ ರಫ್ತಿಗೆ ನಿರ್ಬಂಧ ವಿಧಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


