ಲಾಕ್ ಡೌನ್ ಎಫೆಕ್ಟ್: 280 ಕೋಟಿ ರೂ. ಮೊತ್ತದ ಪಿಎಫ್ ಹಣ ವಿತ್ಡ್ರಾ!
ಲಾಕ್ ಡೌನ್ ಪರಿಣಾಮ, 280 ಕೋಟಿ ರೂಪಾಯಿ ಪಿಎಫ್ ಹಣವನ್ನು ವಿತ್ ಡ್ರಾ ಮಾಡಲಾಗಿದೆ ಎಂದು ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ(ಇಪಿಎಫ್‌ಒ) ತಿಳಿಸಿದೆ.

ನವದೆಹಲಿ: ಲಾಕ್ ಡೌನ್ ಪರಿಣಾಮ, 280 ಕೋಟಿ ರೂಪಾಯಿ ಪಿಎಫ್ ಹಣವನ್ನು ವಿತ್ ಡ್ರಾ ಮಾಡಲಾಗಿದೆ ಎಂದು ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ(ಇಪಿಎಫ್‌ಒ) ತಿಳಿಸಿದೆ.
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಪಿಎಫ್ ಚಂದಾದಾರರಿಗೆ ಸಹಾಯವಾಗುವಂತೆ ಮಾಡಲು ಇಪಿಎಫ್ ಯೋಜನೆಗೆ ತಿದ್ದುಪಡಿ ತರಲಾಗಿದ್ದು ದೇಶಾದ್ಯಂತ ಪಿಎಫ್ ವಿತ್ ಡ್ರಾ ಮಾಡುವುದಕ್ಕೆ 1.37 ಲಕ್ಷ ಅರ್ಜಿಗಳು ಬಂದಿದ್ದವು. ಒಟ್ಟಾರೆ 280 ಕೋಟಿ ರೂಪಾಯಿ ಮೊತ್ತದ ಪಿಎಫ್ ಹಣ ವಿತ್ ಡ್ರಾ ಮಾಡಲಾಗಿದೆ ಎಂದು ಕಾರ್ಮಿಕ ಸಚಿವಾಲಯ ಹೇಳಿದೆ.
ವಿತ್ ಡ್ರಾ ಮಾಡಲಾಗಿರುವ ಹಣವನ್ನು ಈಗಾಗಲೇ ಜಮೆ ಮಾಡುವ ಕೆಲಸ ಪ್ರಾರಂಭವಾಗಿದೆ, ಬೇರೆ ವಿಭಾಗಗಳಲ್ಲಿ ಹಣ ಹಿಂತೆಗೆತಕ್ಕೆ ಅರ್ಜಿ ನೀಡಿರುವವರೂ ಸಹ ಕೋವಿಡ್-19 ವಿರುದ್ಧದ ಹೋರಾಟಕ್ಕಾಗಿ ಹಣ ಹಿಂತೆಗೆಯಬಹುದಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಇಪಿಎಫ್ ಯೋಜನೆಯಿಂದ ಹಣ ಹಿಂತೆಗೆದುಕೊಳ್ಳುವುದಕ್ಕೆ ವಿಶೇಷ ಅವಕಾಶ ಕಲ್ಪಿಸಿರುವುದು ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯ ಭಾಗವಾಗಿದೆ.
ಮೂರು ತಿಂಗಳ ಬೇಸಿಕ್ ವೇತನ ಹಾಗೂ ತುಟ್ಟಿ ಭತ್ಯಗಳ ವ್ಯಾಪ್ತಿಯಲ್ಲಿ ಬರುವ ನಾನ್ ರಿಫಂಡಬಲ್ ವಿತ್ ಡ್ರಾಯಲ್ ಅಥವಾ ಇಪಿಎಫ್ ಖಾತೆಯಲ್ಲಿ ಸದಸ್ಯರ ಕ್ರೆಡಿಟ್ ನಲ್ಲಿ ಲಭ್ಯವಿರುವ ಶೇ.75 ರಷ್ಟು ಮೊತ್ತ ಈ ಎರಡರಲ್ಲಿ ಯಾವುದು ಕಡಿಮೆಯಿದೆಯೋ ಅದನ್ನು ನೀಡಲಾಗುವುದು, ಇದಕ್ಕಿಂತಲೂ ಕಡಿಮೆ ಮೊತ್ತವನ್ನೂ ಸದಸ್ಯರು ಹಿಂತೆಗೆದುಕೊಳ್ಳಬಹುದು, ಇದು ಮುಂಗಡ ಹಣವಾದ್ದರಿಂದ ಇದಕ್ಕೆ ಆದಾಯ ತೆರಿಗೆ ಕಡಿತಗಳು ಇರುವುದಿಲ್ಲ ಎಂದು ಸಚಿವಾಲಯ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


