ಲಾಕ್ ಡೌನ್ ಮುಂದುವರಿಕೆ ಪ್ರಶ್ನೆ: ನಾಳೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ಕೊರೋನಾ ಲಾಕ್ ಡೌನ್ ಮುಂದಿನ ಮಂಗಳವಾರ ಕೊನೆಯಾಗುತ್ತದೆಯೇ ಇಲ್ಲ ಮುಂದುವರಿಯುತ್ತದೆಯೇ ಎಂದು ತಿಳಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ದೇಶವಾಸಿಗಳನ್ನುದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ.

ನವದೆಹಲಿ: ಕೊರೋನಾ ಲಾಕ್ ಡೌನ್ ಮುಂದಿನ ಮಂಗಳವಾರ ಕೊನೆಯಾಗುತ್ತದೆಯೇ ಇಲ್ಲ ಮುಂದುವರಿಯುತ್ತದೆಯೇ ಎಂದು ತಿಳಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ದೇಶವಾಸಿಗಳನ್ನುದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ.
ಅದಕ್ಕೂ ಮುನ್ನ ಅವರು ನಾಳೆ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿ ತೀರ್ಮಾನಕ್ಕೆ ಬರಲಿದ್ದಾರೆ.
ಸರ್ಕಾರದ ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ಲಾಕ್ ಡೌನ್ ಮುಂದುವರಿಯುವ ಸಾಧ್ಯತೆಯಿದ್ದು ಆದರೆ ಈ ಬಾರಿ ಹಲವು ಬದಲಾವಣೆಗಳಾಗುವ ನಿರೀಕ್ಷೆಯಿದೆ. ಅಂತರರಾಜ್ಯ ಚಲನವಲನಗಳಿಗೆ ನಿರ್ಬಂಧ ಹೇರುವ ಸಾಧ್ಯತೆಯಿದೆ. ಅಗತ್ಯ ವಸ್ತುಗಳು ಜನರಿಗೆ ಎಂದಿನಂತೆ ಸಿಗಲಿದೆ. ಶಾಲಾ, ಕಾಲೇಜು, ಧಾರ್ಮಿಕ ಸಂಸ್ಥೆಗಳು ಮುಚ್ಚುವ ಸಾಧ್ಯತೆಯಿದೆ.
ಮೂರು ವಾರಗಳ ಲಾಕ್ ಡೌನ್ ನಿಂದ ಈಗಾಗಲೇ ಆರ್ಥಿಕವಾಗಿ ಸಾಕಷ್ಟು ನಷ್ಟವುಂಟಾಗಿರುವುದರಿಂದ ಕೆಲವು ವಲಯಗಳಿಗೆ ವಿನಾಯ್ತಿ ಘೋಷಿಸುವ ಸಾಧ್ಯತೆಯಿದೆ, ಅದು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಬಂಧನೆ ಹೇರುವ ಮೂಲಕ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


