ದೇಶ

ಐಸೋಲೇಷನ್ ವಾರ್ಡಿನಲ್ಲಿದ್ದ ಮಹಿಳೆ ಮೇಲೆ ಸತತ 2 ರಾತ್ರಿ ಅತ್ಯಾಚಾರ: ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

ಒಂದೆಡೆ ದೇಶದಲ್ಲಿ ಕೊರೋನಾ ವೈರಸ್ ಕಾಡುತ್ತಿದ್ದರೆ, ಮತ್ತೊಂದೆಡೆ ಕಾಮುಕರ ಅಟ್ಟಹಾಸ ಕೂಡ ಮಹಿಳೆಯರನ್ನು ಎಡೆಬಿಡದೆ ಕಾಡುತ್ತಲೇ ಇದೆ. ಬಿಹಾರ ರಾಜ್ಯದಲ್ಲಿ ಐಸೋಲೇಷನ್ ವಾರ್ಡ್ ನಲ್ಲಿದ್ದ ಮಹಿಳೆ ಮೇಲೆ ವೈದ್ಯರು ಸತತ ಎರಡು ರಾತ್ರಿ ಅತ್ಯಾಚಾರ ನಡೆಸಿದ್ದಾರೆಂಬ ಆರೋಪಗಳು ಕೇಳಿ ಬಂದಿದೆ.

ಐಸೋಲೇಷನ್ ವಾರ್ಡಿನಲ್ಲಿದ್ದ ಮಹಿಳೆ ಮೇಲೆ ಸತತ 2 ರಾತ್ರಿ ಅತ್ಯಾಚಾರ: ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು
ಸಂಗ್ರಹ ಚಿತ್ರ
Published On :

ಪಾಟ್ನಾ: ಒಂದೆಡೆ ದೇಶದಲ್ಲಿ ಕೊರೋನಾ ವೈರಸ್ ಕಾಡುತ್ತಿದ್ದರೆ, ಮತ್ತೊಂದೆಡೆ ಕಾಮುಕರ ಅಟ್ಟಹಾಸ ಕೂಡ ಮಹಿಳೆಯರನ್ನು ಎಡೆಬಿಡದೆ ಕಾಡುತ್ತಲೇ ಇದೆ. ಬಿಹಾರ ರಾಜ್ಯದಲ್ಲಿ ಐಸೋಲೇಷನ್ ವಾರ್ಡ್ ನಲ್ಲಿದ್ದ ಮಹಿಳೆ ಮೇಲೆ ವೈದ್ಯರು ಸತತ ಎರಡು ರಾತ್ರಿ ಅತ್ಯಾಚಾರ ನಡೆಸಿದ್ದಾರೆಂಬ ಆರೋಪಗಳು ಕೇಳಿ ಬಂದಿದೆ. 

ಬಿಹಾರ ರಾಜ್ಯದ ಗಯಾ ದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಆಸ್ಪತ್ರೆಯಲ್ಲಿ ಐಸೋಲೇಷನ್ ವಾರ್ಡಿನಲ್ಲಿದ್ದ ಮಹಿಳೆ ಮೇಲೆ ವೈದ್ಯರು ಸತತ ಎರಡು ರಾತ್ರಿ ಅತ್ಯಾಚಾರ ಎಸಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕ ಸಂತ್ರಸ್ತೆ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದೆ. 

ಅನುಗ್ರಹ ನಾರಾಯಣ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಸಂತ್ರಸ್ತೆಯ ಅತ್ತೆ ಅಧಿಕಾರಿಗಳಿಗೆ ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. 

ಲಾಕ್ ಡೌನ್ ಆದ ಬಳಿಕ 25 ವರ್ಷದ ಸಂತ್ರಸ್ತೆ ಪಂಬಾಜ್ ರಾಜ್ಯದ ಲುಧಿಯಾನದಿಂದ ಬಿಹಾರದ ಗಯಾಕ್ಕೆ ಮಾರ್ಚ್ 25 ರಂದು ಪತಿಯೊಂದಿಗೆ ಬಂದಿದ್ದರು. ಸಂತ್ರಸ್ತೆ ಎರಡು ತಿಂಗಳ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವಾಗಿತ್ತು. ಗರ್ಭಪಾತವಾದ ಕಾರಣ ತೀವ್ರ ರಕ್ತಸ್ರಾವವಾಗುತ್ತಿತ್ತು. ಹೀಗಾಗಿ ಆಕೆಯನ್ನು ಮಾರ್ಚ್ 27 ರಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಆಕೆಯನ್ನು ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿತ್ತು. 

ಏಪ್ರಿಲ್ 1 ರಂದು ವೈರಸ್ ಶಂಕೆಯಿಂದಾಗಿ ಪ್ರತ್ಯೇಕ ವಾರ್ಡಿನಲ್ಲಿ ಇರಿಸಲಾಗಿತ್ತು. ವಾರ್ಡಿನಲ್ಲಿ ಮಹಿಳೆ ಒಬ್ಬಂಟಿಯಾಗಿದ್ದಳು. ಇದೇ ವೇಳೆ ತಪಾಸಣೆ ಮಾಡಲು ಬರುತ್ತಿದ್ದ ವೈದ್ಯರು ಏಪ್ರಿಲ್ 2 ಮತ್ತು 3 ರಂದು ಸತತ ಎರಡು ರಾತ್ರಿ ಅತ್ಯಾಚಾರವೆಸಗಿದ್ದಾರೆಂದು ಸಂತ್ರಸ್ತೆಯ ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ. 

ವೈರಸ್ ಇಲ್ಲದಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಮಹಿಳೆಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಆದರೆ, ಆಸ್ಪತ್ರೆಯಿಂದ ಮನೆಗೆ ಬಂದ ಮಹಿಳೆಯಲ್ಲಿ ಸಾಕಷ್ಟು ಬದಲಾವಣೆ ಕಂಡು ಬಂದಿತ್ತು. ಮೌನ ಹಾಗೂ ಭೀತಿಗೊಳಗಾಗಿದ್ದರು. ಮನೆಯವರು ಸಾಕಷ್ಟು ಒತ್ತಾಯ ಮಾಡಿದ ಬಳಿಕ ಮಹಿಳೆ ನಡೆದ ಘಟನೆಯನ್ನು ವಿವರಿಸಿದ್ದಾಳೆ. 

ಬಳಿಕ ಸಂತ್ರಸ್ತೆಯ ಅತ್ತೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆಸ್ಪತ್ರೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಸಂತ್ರಸ್ತೆ ಆರೋಪಿಗಳನ್ನು ಗುರುತಿಸುವಲ್ಲಿ ವಿಫಲರಾಗಿದ್ದಾರೆ. ಪ್ರಸ್ತುತ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಮುಂದುವರೆಸಿದ್ದಾರೆ. ಅಲ್ಲದೆ, ವಾರ್ಡಿಗೆ ತೆರಳಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧನಕ್ಕೊಳಪಡಿಸಿ, ವಿಚಾರಣೆ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.