ದೇಶ

ತಾಜ್ ಹೊಟೆಲ್ ನ 6 ಉದ್ಯೋಗಿಗಳಿಗೆ ಕೊರೋನಾ ಸೋಂಕು ದೃಢ

ದಕ್ಷಿಣ ಮುಂಬೈ ನ ತಾಜ್ ಮಹಲ್ ಪ್ಯಾಲೇಸ್, ಟವರ್ಸ್ ಹೊಟೇಲ್ ನ 6 ಮಂದಿ ಉದ್ಯೋಗಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ತಾಜ್ ಹೊಟೆಲ್ ನ 6 ಉದ್ಯೋಗಿಗಳಿಗೆ ಕೊರೋನಾ ಸೋಂಕು ದೃಢ
ತಾಜ್ ಹೊಟೆಲ್
Published On :

ಮುಂಬೈ: ದಕ್ಷಿಣ ಮುಂಬೈ ನ ತಾಜ್ ಮಹಲ್ ಪ್ಯಾಲೇಸ್, ಟವರ್ಸ್ ಹೊಟೇಲ್ ನ 6 ಮಂದಿ ಉದ್ಯೋಗಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 

ತಾಲ್ ಹೊಟೆಲ್ ನ್ನು ನಡೆಸುತ್ತಿರುವ ಇಂಡಿಯನ್ ಹೊಟೆಲ್ಸ್ ಕಂಪನಿ ಈ ವಿಷಯವನ್ನು ಬಹಿರಂಗಪಡಿಸಿದ್ದು, ತನ್ನ ಸಂಸ್ಥೆಯ ಕೆಲವು ಉದ್ಯೋಗಿಗಳಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದಷ್ಟೇ ಹೇಳಿದೆ. ನಿಖರವಾದ ಸಂಖ್ಯೆಯನ್ನು ಬಹಿರಂಗಪಡಿಸಿಲ್ಲ. 

ಕೊರೋನಾ ಹಿನ್ನೆಲೆಯಲ್ಲಿ ತುರ್ತು ಸೇವೆಗಳನ್ನು ಒದಗಿಸುತ್ತಿರುವವರು, ಕೊರೋನಾಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಿಗೆ ತಾಜ್ ಹೊಟೆಲ್ ನಲ್ಲಿ ಸೌಲಭ್ಯ ಕಲ್ಪಿಸಲಾಗಿದೆ. ಕೊರೋನಾ ಸೋಂಕು ತಗುಲಿರುವ ತಾಜ್ ಹೊಟೆಲ್ ನ 6 ನೌಕರರಿಗೆ ಬಾಂಬೆ ಹಾಸ್ಪೆಟಲ್ ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಡಾ.ಗೌತಮ್ ಬನ್ಸಾಲಿ ಹೇಳಿದ್ದಾರೆ.

ಸೋಂಕು ತಗುಲಿರುವವರ ಜೊತೆ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈಗೆ ಕಳಿಸಲಾಗಿದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.