ದೇಶ

ನಕಲಿ ಪಾಸ್ ಮಾರಾಟ ಮಾಡುತ್ತಿದ್ದವರ ಬಂಧನ

ಪೊಲೀಸ್ ನಕಲಿ ಪಾಸ್ ಸೃಷ್ಟಿಸಿ ದುರ್ಬಳಕೆ ಮಾಡುತ್ತಿದ್ದ ಆರು ಜನರನ್ನು ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ನಕಲಿ ಪಾಸ್ ಮಾರಾಟ ಮಾಡುತ್ತಿದ್ದವರ ಬಂಧನ
ಸಂಗ್ರಹ ಚಿತ್ರ
Published On :

ಬೆಂಗಳೂರು: ಪೊಲೀಸ್ ನಕಲಿ ಪಾಸ್ ಸೃಷ್ಟಿಸಿ ದುರ್ಬಳಕೆ ಮಾಡುತ್ತಿದ್ದ ಆರು ಜನರನ್ನು ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಕೊರೊನಾ ವೈರಸ್​ ನಿಯಂತ್ರಿಸಲು ಲಾಕ್​​ ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ತುರ್ತು ಸಂದರ್ಭಗಳಲ್ಲಿ ಉಪಯೋಗಿಸಿಕೊಳ್ಳಲು ಪೊಲೀಸರು ಪಾಸ್​ ವಿತರಣೆ ಮಾಡಿದ್ದಾರೆ. ಇದನ್ನೇ ಕೇಂದ್ರಿಕರಿಸಿಕೊಂಡು ಕೆಲವರು ನಕಲಿ ಪಾಸ್ ಸೃಷ್ಟಿಸಿ ಮಾರಾಟ ಮಾಡುತ್ತಿದ್ದರು.


ಬಂಧಿತರನ್ನು ನದೀಂ ಪಾಷಾ, ಮುಹಮ್ಮದ್ ಅಬ್ದುಲ್ ರೆಹಮಾನ್, ಮುಹಮ್ಮದ್ ಜುನೈದ್ ಖುರೇಷಿ, ಮುಹಮ್ಮದ್ ರಾಖೀಬ್ ಹಾಗೂ ಇರ್ಷಾದ್ ಪಾಷಾ ಮತ್ತು ಜಬೀವುಲ್ಲಾ ಖಾನ್ ಎಂದು ಗುರುತಿಸಲಾಗಿದೆ.

ಮಂಗಳೂರು, ವಿಜಯಪುರದಲ್ಲೂ ನಕಲಿ ಪಾಸ್ ಹಾವಳಿ
ಇತ್ತ ನಕಲಿ ಪಾಸ್ ಹಾವಳಿ ಮಂಗಳೂರು ಮತ್ತು ವಿಜಯಪುರದಲ್ಲೂ ಮುಂದುವರೆದಿದ್ದು,ಕೊರೊನಾ ವೈರಸ್ ತಡೆಗೆ ಲಾಕ್ ಡೌನ್ ಜಾರಿಯಲ್ಲಿದೆ. ಆದರೆ ಪೊಲೀಸ್ ಇಲಾಖೆಯಿಂದ ಪಾಸ್ ಪಡೆದರೆ ಅಗತ್ಯ ಕೆಲಸಕ್ಕೆ ಹೊರಗೆ ಓಡಾಡಬಹುದು. ಇದನ್ನೇ ಬಂಡವಾಳ ಮಾಡಿಕೊಂಡಿರುವ  ಕೆಲವರು ನಕಲಿ ಪಾಸ್ ಗಳನ್ನು ಮಾರಾಟ ಮಾಡುತ್ತಿದ್ದಾರೆ. ವಿಜಯಪುರ ಹಾಗೂ ಚಿಕ್ಕಮಗಳೂರಲ್ಲಿ ನಕಲಿ ಪಾಸ್ ಮಾರಾಟ ಮಾಡುತ್ತಿದ್ದವರನ್ನು ಪೊಲೀಸರು ಬಂಧನ ಮಾಡಿದ್ದಾರೆ. ವಿಜಯಪುರದಲ್ಲಿ ಮಾಮಾಶ್ರೀ ಎಂಬುವವನನ್ನು ಹಾಗೂ ಚಿಕ್ಕಮಗಳೂರಲ್ಲಿ ಅಪ್ರಾಪ್ತ ವಯಸ್ಕ ಹಾಗೂ  ಇದಕ್ಕೆ ಸಹಕರಿಸಿದ ಆತನ ತಾಯಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿಯೊಂದು ಪಾಸ್ ನ್ನು 500 ರಿಂದ 1000 ರೂಪಾಯಿಗೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.