ಲಾಕ್ ಡೌನ್ ವಿಸ್ತರಣೆ ಸಂಬಂಧ ನಿರ್ಧಾರ ಇಂದು: ಎಲ್ಲರ ಚಿತ್ತ ಮೋದಿ ಘೋಷಣೆಯತ್ತ
ಕರೋನಾ ವೈರಸ್ ವಿರುದ್ಧದ ಹೋರಾಟದ ಹಿನ್ನೆಲೆಯಲ್ಲಿ ದೇಶಾದ್ಯಂತ ಘೋಷಿಸಿದ್ದ 21 ದಿನಗಳ ಲಾಕ್ ಡೌನ್ ಇನ್ನು ಒಂದು ದಿನದಲ್ಲಿ ಕೊನೆಯಾಗಲಿದೆ. ಲಾಕ್ ಡೌನ್ ವಿಸ್ತರಣೆ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಾವ ಸಮಯದಲ್ಲಾದರೂ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.

ನವದೆಹಲಿ: ಕರೋನಾ ವೈರಸ್ ವಿರುದ್ಧದ ಹೋರಾಟದ ಹಿನ್ನೆಲೆಯಲ್ಲಿ ದೇಶಾದ್ಯಂತ ಘೋಷಿಸಿದ್ದ 21 ದಿನಗಳ ಲಾಕ್ ಡೌನ್ ಇನ್ನು ಒಂದು ದಿನದಲ್ಲಿ ಕೊನೆಯಾಗಲಿದೆ. ಲಾಕ್ ಡೌನ್ ವಿಸ್ತರಣೆ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಾವ ಸಮಯದಲ್ಲಾದರೂ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.
ಶನಿವಾರ ದೇಶದ ಎಲ್ಲ ರಾಜ್ಯಗಳ ನಡೆದ ಮುಖ್ಯಮಂತ್ರಿಗಳ ಜೊತೆಗಿನ ಸಭೆಯಲ್ಲಿ ಬಹುತೇಕ ರಾಜ್ಯಗಳ ಸಿಎಂ ಗಳು ಲಾಕ್ ಡೌನ್ ಮುಂದುವರಿಸುವಂತೆ ಸಲಹೆ ನೀಡಿದ್ದಾರೆ.
ಕೊರೋನಾ ಹಾಟ್ ಸ್ಪಾಟ್ ಮತ್ತು ರೆಡ್ ಜೋನ್ ಎಂದು ಗುರುತಿಸಲ್ಪಟ್ಟಿರುವ ಪ್ರದೇಶಗಳಲ್ಲಿ ಲಾಕ್ ಡೌನ್ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಈಗಾಗಲೇ ತೆಲಂಗಾಣ, ಮಹಾರಾಷ್ಟ್ರ, ಪಂಜಾಬ್ ಮತ್ತು ಒಡಿಸ್ಸಾ ರಾಜ್ಯಗಳು ಏಪ್ರಿಲ್ 30ರ ವರೆಗೆ ಲಾಕ್ ಡೌನ್ ವಿಸ್ತರಿಸಿವೆ.
ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ಪ್ರಕಾರ ಭಾನುವಾರ ಸಂಜೆ 5 ರವೇಳೆಗೆ ದೇಶದಲ್ಲಿ 8,447 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಅದರಲ್ಲಿ 765 ಮಂದಿ ಗುಣಮುಖವಾಗಿದ್ದಾರೆ,273 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 918 ಕೇಸ್ ಗಳು ದಾಖಲಾಗಿದ್ದು, 34 ಸಾವಿನ ಪ್ರಕರಣಗಳು ವರದಿಯಾಗಿವೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


