ಲಾಕ್ ಡೌನ್ ನಡುವೆಯೂ ಅಸ್ಸಾಂ, ಮೇಘಾಲಯಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ
ಕೊರೋನಾ ಸಾಂಕ್ರಾಮಿಕ ನಿಯಂತ್ರಿಸುವ ನಿಟ್ಟಿನಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಲಾಕ್‌ಡೌನ್ ಮುಂದುವರಿಸುವ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಈ ನಡುವೆ ಅಸ್ಸಾಂ ಮತ್ತು ಮೇಘಾಲಯದ ಅಬಕಾರಿ ಇಲಾಖೆಗಳು ಸೋಮವಾರದಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿವೆ.

ಗುವಾಹಟಿ: ಕೊರೋನಾ ಸಾಂಕ್ರಾಮಿಕ ನಿಯಂತ್ರಿಸುವ ನಿಟ್ಟಿನಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಲಾಕ್‌ಡೌನ್ ಮುಂದುವರಿಸುವ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಈ ನಡುವೆ ಅಸ್ಸಾಂ ಮತ್ತು ಮೇಘಾಲಯದ ಅಬಕಾರಿ ಇಲಾಖೆಗಳು ಸೋಮವಾರದಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿವೆ.
ಅಸ್ಸಾಂನಲ್ಲಿ ಮದ್ಯ ಮಾರಾಟದ ಅಂಗಡಿಗಳು, ಸಗಟು ಮಾರಾಟ ಕೇಂದ್ರಗಳು, ಮದ್ಯ ತಯಾರಿಕಾ ಘಟಕಗಳು ಹಾಗೂ ಬಾಟಲಿಂಗ್ ಘಟಕಗಳು ಇಂದಿನಿಂದ ನಿತ್ಯ ಏಳು ಗಂಟೆ ತೆರೆಯಲು ಸರ್ಕಾರ ಅವಕಾಶ ಕಲ್ಪಿಸಿದೆ.
ಪಕ್ಕದ ಮೇಘಾಲಯದಲ್ಲಿ ಬೆಳಿಗ್ಗೆ 9ರಿಂದ ಸಂಜೆ 4ರ ವರೆಗೂ ರಿಟೇಲ್ ಮದ್ಯ ಮಾರಾಟ ಕೇಂದ್ರಗಳು, ಅಂಗಡಿಗಳು ಹಾಗೂ ಸಂಗ್ರಹ ಘಟಕಗಳು ಕಾರ್ಯನಿರ್ವಹಿಸಲಿವೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಶುಚಿತ್ವ ಕಾಪಾಡುವುದಕ್ಕೆ ಆದ್ಯತೆ ನೀಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಅನುಮತಿ ನೀಡಿರುವ ದಿನಗಳಂದು ಮದ್ಯ ಮಾರಾಟ ಅಂಗಡಿಗಳು ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೂ ತೆರೆದಿರಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


