ಮುಂಬೈ: ಬಾಂದ್ರಾ ನಿಲ್ದಾಣಕ್ಕೆ ಬಂದ ಸಾವಿರಾರು ವಲಸೆ ಕಾರ್ಮಿಕರು, ವಾಪಸ್ ಊರಿಗೆ ಹೋಗಲು ಪಟ್ಟು
ದೇಶಾದ್ಯಂತ ತೀವ್ರವಾಗಿ ವ್ಯಾಪಿಸುತ್ತಿರುವ ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್‌ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಿದ್ದು, ಇದರಿಂದ ಕೆರಳಿದ ಮುಂಬೈನ ಸಾವಿರಾರು ವಲಸೆ ಕಾರ್ಮಿಕರು...

ಮುಂಬೈ: ದೇಶಾದ್ಯಂತ ತೀವ್ರವಾಗಿ ವ್ಯಾಪಿಸುತ್ತಿರುವ ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್‌ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಿದ್ದು, ಇದರಿಂದ ಕೆರಳಿದ ಮುಂಬೈನ ಸಾವಿರಾರು ವಲಸೆ ಕಾರ್ಮಿಕರು, ದಿನಗೂಲಿಗಳು ಮಂಗಳವಾರ ದಿಢೀರ್ ಬಾಂದ್ರಾ ರೈಲ್ವೆ ನಿಲ್ದಾಣಕ್ಕೆ ಆಗಮಿಸಿ, ತಾವು ವಾಪಸ್ ಮನೆಗೆ ಹೋಗಬೇಕು ಎಂದು ಪಟ್ಟು ಹಿಡಿದು ಪ್ರತಿಭಟನೆಗೆ ಮುಂದಾದ ಘಟನೆ ನಡೆದಿದೆ.
ಮೋದಿ ಲಾಕ್ ಡೌನ್ ವಿಸ್ತರಿಸಿದ ಕೆಲವೇ ಗಂಟೆಗಳಲ್ಲಿ ರಸ್ತೆಗೆ ಬಂದ ಸಾವಿರಾರು ಕಾರ್ಮಿಕರು, ತಾವು ವಾಪಸ್ ತಮ್ಮ ತಮ್ಮ ಊರಿಗೆ ತೆರಳಲು ಬಸ್ ಇಲ್ಲವೆ ರೈಲು ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.
ಲಾಕ್‌ಡೌನ್ ವಿಸ್ತರಿಸಿರುವುದು ಸರಿಯಲ್ಲ. ನಮ್ಮ ಬದುಕು ದುಸ್ತರವಾಗಿದೆ. ನಮ್ಮೂರಿಗೆ ನಮ್ಮನ್ನು ಕಳುಹಿಸಲು ವ್ಯವಸ್ಥೆ ಮಾಡಿ ಎಂಬ ಆಗ್ರಹದೊಂದಿಗೆ ರಸ್ತೆಗಿಳಿದ ಸಾವಿರಾರು ಮಂದಿಯನ್ನು ಪೊಲೀಸರು ಲಾಠಿ ಪ್ರಯೋಗಿಸಿ ಚದುರಿಸಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.
ಮುಂಬೈನ ಪಟೇಲ್ ನಗರಿ ಕೊಳೆಗೇರಿಯಲ್ಲಿ ವಾಸವಾಗಿರುವ ಸಾವಿರಕ್ಕೂ ಹೆಚ್ಚು ವಲಸೆ ಕಾರ್ಮಿಕರು ಮಂಗಳವಾರ ಮಧ್ಯಾಹ್ನ ಬಾಂದ್ರಾದ ರೈಲ್ವೇ ನಿಲ್ದಾಣದ ಸಮೀಪದ ಪಶ್ಚಿಮ ಬಸ್ ಡಿಪೋಟ್ ಬಳಿ ಜಮಾಯಿಸಿದರು. ತಮ್ಮ ಊರುಗಳಿಗೆ ತೆರಳಲು ಸಾರಿಗೆ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರತಿಭಟನೆಗೆ ಮುಂದಾಗಿದ್ದವರೆಲ್ಲರೂ ಉತ್ತರ ಪ್ರದೇಶ ಮತ್ತು ಪಶ್ಚಿಮಬಂಗಾಳ ಮೂಲದವರು ಎಂದು ಹೇಳಲಾಗಿದೆ.
ಇನ್ನು ಈ ಕುರಿತು ಮಾತನಾಡಿರುವ ಹೆಸರು ಹೇಳಲಿಚ್ಚಿಸದ ವಲಸೆ ಕಾರ್ಮಿಕರೊಬ್ಬರು, ಎನ್‌ಜಿಒಗಳು ನಮಗೆ ಆಹಾರವನ್ನೇನೋ ನೀಡುತ್ತಿವೆ. ಆದರೆ, ಬಹುತೇಕರು ಈ ಸನ್ನಿವೇಶದಲ್ಲಿ ತಮ್ಮ ಊರು ಸೇರಿಕೊಳ್ಳಲು ಬಯಸುತ್ತಿದ್ದಾರೆ. ಲಾಕ್‌ಡೌನ್ ನಮ್ಮ ಬದುಕನ್ನು ದುಸ್ತರಗೊಳಿಸಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


