ಕೊರೋನಾ: ಕಳೆದ 14 ದಿನಗಳಿಂದ ದೇಶದ 25 ಜಿಲ್ಲೆಗಳಲ್ಲಿ ಹೊಸ ಕೇಸ್ ಗಳು ಇಲ್ಲ
ಕೊರೋನಾ ನಿಗ್ರಹಕ್ಕಾಗಿ ಕೇಂದ್ರ ಸರ್ಕಾರ ಘೋಷಿಸಿರುವ 21 ದಿನಗಳ ಲಾಕ್ ಡೌನ್ ಫಲ ಕೊಟ್ಟಿದೆ. ಈ ಮೊದಲು ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದ 15 ರಾಜ್ಯಗಳ 25 ಜಿಲ್ಲೆಗಳಲ್ಲಿ ಕಳೆದ 14 ದಿನಗಳ ಅವಧಿಯಲ್ಲಿ ಒಂದೇ ಒಂದು ಸೋಂಕು ಪ್ರಕರಣಗಳೂ ದಾಖಲಾಗಿಲ್ಲ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ನವದೆಹಲಿ: ಕೊರೋನಾ ನಿಗ್ರಹಕ್ಕಾಗಿ ಕೇಂದ್ರ ಸರ್ಕಾರ ಘೋಷಿಸಿರುವ 21 ದಿನಗಳ ಲಾಕ್ ಡೌನ್ ಫಲ ಕೊಟ್ಟಿದೆ. ಈ ಮೊದಲು ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದ 15 ರಾಜ್ಯಗಳ 25 ಜಿಲ್ಲೆಗಳಲ್ಲಿ ಕಳೆದ 14 ದಿನಗಳ ಅವಧಿಯಲ್ಲಿ ಒಂದೇ ಒಂದು ಸೋಂಕು ಪ್ರಕರಣಗಳೂ ದಾಖಲಾಗಿಲ್ಲ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಈ 25 ಜಿಲ್ಲೆಗಳಲ್ಲಿ ಕರ್ನಾಟಕದ ದಾವಣಗೆರೆ, ಉಡುಪಿ, ಕೊಡಗು, ತುಮಕೂರು ಜಿಲ್ಲೆಗಳೂ ಕೂಡ ಸೇರಿವೆ.
ನಿನ್ನೆಯಷ್ಟೇ ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಅವರು, ಮುಂದಿನ ಆರು ವಾರಗಳ ಕಾಲ ಪರೀಕ್ಷೆ ನಡೆಸಲು ಬೇಕಾದ ಪರಿಕರಗಳು ಸರ್ಕಾರದ ಬಳಿ ಲಭ್ಯವಿದೆ. ಈವರೆಗೆ 2 ಲಕ್ಷ ಜನರ ಮಾದರಿಗಲನ್ನು ಪರೀಕ್ಷೆ ನಡೆಸಲಾಗಿದೆ. ಕೊರೋನಾ ವೈರಸ್ ಪತ್ತೆಯಾಗಿದ್ದ 15 ರಾಜ್ಯಗಳ 25 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ದಾಖಲಾಗದೇ ಇರುವುದು ಧನಾತ್ಮಕ ಬೆಳವಣಿಗೆ. ಲಾಕ್'ಡೌನ್ ಅನ್ನು ಜಿಲ್ಲಾಡಳಿತಗಳು ಸರಿಯಾಗಿ ಜಾರಿಗೊಳಿಸಿದ್ದರಿಂದ ಈ ಫಲಿತಾಂಶ ದೊರೆತಿದೆ ಎಂದು ಹೇಳಿದರು.
ಇಷ್ಟು ದಿನ ಸೋಂಕಿನ ಲಕ್ಷಣಗಳಿರುವ ವ್ಯಕ್ತಿಗಳನ್ನು ಮಾತ್ರ ಕೊರೋನಾ ಪರೀಕ್ಷೆಗೆ ಒಲಪಡಿಸುತ್ತಿದ್ದ ಭಾರತ ಸರ್ಕಾರ ಇದೀಗ ಕೊರೋನಾ ಸೋಂಕು ಇಲ್ಲಿಯವರೆಗೂ ವರದಿಯಾಗದ ಕೋಲ್ಟ್ ಸ್ಪಾಟ್ ಗಳಲ್ಲೂ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಸೋಂಕು ಪತ್ತೆಯಾಗದೆ ಒಳಗೊಳಗೇ ಹರಡುವುದನ್ನು ತಡೆಯಲು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.
ಪ್ರಸ್ತುತ ದೇಶದ ಅರ್ಧದಷ್ಟು ಜಿಲ್ಲೆಗಳಲ್ಲಿ ಮಾತ್ರ ಕೊರೋನಾ ಸೋಂಕು ವರದಿಯಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಂದೂ ಸೋಂಕು ವರದಿಯಾಗಿಲ್ಲ. ಆ ಜಿಲ್ಲೆಗಳಲ್ಲಿ ಕೋಲ್ಟ್ ಸ್ಪಾಟ್'ಗಳು ಎಂದು ಗುರುತಿಸಲಾಗಿದೆ. ಆದರೆ, ಭಾರತದಲ್ಲಿ ಸಾಕಷ್ಟು ಟೆಸ್ಟಿಂಗ್ ನಡೆಸುತ್ತಿಲ್ಲ. ಆದ್ದರಿಂದಲೇ ಸೋಂಕು ಹೆಚ್ಚಾಗಿ ವರದಿಯಾಗಿಲ್ಲ ಎಂಬ ಟೀಕೆಗಳಿವೆ. ಹೀಗಾಗಿ ಸೋಂಕು ಹರಡುತ್ತಿರುವುದು ಖಚಿತಪಟ್ಟಿರದ ಜಿಲ್ಲೆಗಳಲ್ಲಿ ಕೊರೋನಾ ಟೆಸ್ಟಿಂಗ್ ನಡೆಸಲು ಸರ್ಕಾರ ನಿರ್ಧರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


