ಮೇಘಾಲಯದಲ್ಲಿ ಕೊರೋನಾ ವೈರಸ್ ಗೆ ವೈದ್ಯ ಬಲಿ, ರಾಜ್ಯದಲ್ಲಿ ಮೊದಲ ಪ್ರಕರಣ
ಮೇಘಾಲಯದಲ್ಲಿ ಬುಧವಾರ ಹಿರಿಯ ವೈದ್ಯರೊಬ್ಬರು ಕೊವಿಡ್-19 ನಿಂದ ಮೃತಪಟ್ಟಿದ್ದು, ಇದರೊಂದಿಗೆ ಕಣಿವೆ ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಮೊದಲ ಬಲಿ ಪಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿಲ್ಲಾಂಗ್: ಮೇಘಾಲಯದಲ್ಲಿ ಬುಧವಾರ ಹಿರಿಯ ವೈದ್ಯರೊಬ್ಬರು ಕೊವಿಡ್-19 ನಿಂದ ಮೃತಪಟ್ಟಿದ್ದು, ಇದರೊಂದಿಗೆ ಕಣಿವೆ ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಮೊದಲ ಬಲಿ ಪಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೊರೋನಾ ವೈರಸ್ ನಿಂದ ವೈದ್ಯರ ಸಾವು ಖಚಿತಪಡಿಸಿದ ಮೇಘಾಲಯ ಮುಖ್ಯಮಂತ್ರಿ ಕೊನ್ರಾಡ್ ಕೆ ಸಗ್ಮಾ ಅವರು, ಮೇಘಾಲಯದ ಮೊದಲ COVID-19 ರೋಗಿಯೊಬ್ಬರು ಇಂದು (ಬುಧವಾರ) ನಿಧನರಾದರು ಎಂದು ತಿಳಿಸಲು ನನಗೆ ತುಂಬಾ ದುಃಖವಾಗುತ್ತಿದೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಹೃತ್ಪೂರ್ವಕ ಸಂತಾಪ. ಅವರ ಆತ್ಮವು ಶಾಂತಿಯಿಂದ ವಿಶ್ರಾಂತಿ ಪಡೆಯಲಿ" ಎಂದು ಹೇಳಿದ್ದಾರೆ.
ಖಾಸಗಿ ಆಸ್ಪತ್ರೆಯೊಂದರ ಸಂಸ್ಥಾಪಕರಾಗಿದ್ದ 69 ವರ್ಷದ ವೈದ್ಯರೊಬ್ಬರಿಗೆ ಎರಡು ದಿನಗಳ ಹಿಂದೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿತ್ತು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


