ದೇಶ

ಆರೋಗ್ಯ, ಮೋಟಾರು, ವಿಮಾ ಪಾಲಿಸಿ ನವೀಕರಿಸಲು ಕಾಲವಕಾಶ: ನಿರ್ಮಲಾ ಸೀತಾರಾಮನ್

ಕೊರೋನಾ ಸೋಂಕು ಹಾಗೂ ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆ ಮಾಡಲಾಗಿರುವ ಕಾರಣ ಆರೋಗ್ಯ, ಮೋಟಾರು ವಿಮಾ ಪಾಲಿಸಿ ಕಂತು ನವೀಕರಿಸಲು ಮೇ 15 ರ ತನಕ ಅವಕಾಶವಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಆರೋಗ್ಯ, ಮೋಟಾರು, ವಿಮಾ ಪಾಲಿಸಿ ನವೀಕರಿಸಲು ಕಾಲವಕಾಶ: ನಿರ್ಮಲಾ ಸೀತಾರಾಮನ್
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
Published On :

ನವದೆಹಲಿ: ಕೊರೋನಾ ಸೋಂಕು ಹಾಗೂ ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆ ಮಾಡಲಾಗಿರುವ ಕಾರಣ ಆರೋಗ್ಯ, ಮೋಟಾರು ವಿಮಾ ಪಾಲಿಸಿ ಕಂತು ನವೀಕರಿಸಲು ಮೇ 15 ರ ತನಕ ಅವಕಾಶವಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಳದೆ ಮಾರ್ಚ್ 25 ರಿಂದ ಮೇ 3 ರ ನಡುವೆ ಕಂತು ಪಾವತಿಸಬೇಕಿದ್ದ ಪಾಲಿಸಿಗಳಿಗೆ ಮಾತ್ರ ಈ ವಿನಾಯಿತಿ ಅನ್ವಯವಾಗಲಿದೆ ಎಂದೂ ಸ್ಪಷ್ಟಪಡಿಸಿದ್ದಾರೆ.

ಕಂತು ವಿನಾಯಿತಿ ಅವಧಿಯಲ್ಲೂ ವಿಮಾ ಕಂಪನಿಗಳು ಕ್ಲೇಮುಗಳ ಪ್ರಕ್ರಿಯೆಯನ್ನು ಎಂದಿನಂತೆ ನಡೆಸಬೇಕು ಎಂದು ಸೂಚಿಸಿದ್ದಾರೆ.

ಗೃಹ ಸೇರಿದಂತೆ ವಿವಿಧ ಸಾಲಗಳ ಕಂತು ಪಾವತಿಗೆ ಈ ಹಿಂದೆಯೇ ಕೇಂದ್ರ ಹಣಕಾಸು ಸಚಿವಾಲಯ ಮೂರು ತಿಂಗಳ ವಿನಾಯಿತಿ ಘೋಷಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.