ಮುಂಬೈ: ಧಾರಾವಿಯಲ್ಲಿ ಕೊರೋನಾಗೆ ಮತ್ತೆ ಇಬ್ಬರು ಬಲಿ, ಸಾವಿನ ಸಂಖ್ಯೆ 9ಕ್ಕೆ, ಸೋಂಕಿತರ ಸಂಖ್ಯೆ 86ಕ್ಕೆ ಏರಿಕೆ
ಮುಂಬೈನ ಧಾರಾವಿಯಲ್ಲಿ ಮಹಾಮಾರಿ ಕೊರೋನಾ ವೈರಸ್ ಗೆ ಗುರುವಾರ ಮತ್ತೆ ಇಬ್ಬರು ಬಲಿಯಾಗಿದ್ದು, ಏಷ್ಯಾದ ಅತಿ ದೊಡ್ಡ ಸ್ಲಂನಲ್ಲಿ ಒಂದೇ ದಿನ 26 ಮಂದಿಗೆ ಕೊವಿಡ್-19 ದೃಢಪಟ್ಟಿದೆ.

ಮುಂಬೈ: ಮುಂಬೈನ ಧಾರಾವಿಯಲ್ಲಿ ಮಹಾಮಾರಿ ಕೊರೋನಾ ವೈರಸ್ ಗೆ ಗುರುವಾರ ಮತ್ತೆ ಇಬ್ಬರು ಬಲಿಯಾಗಿದ್ದು, ಏಷ್ಯಾದ ಅತಿ ದೊಡ್ಡ ಸ್ಲಂನಲ್ಲಿ ಒಂದೇ ದಿನ 26 ಮಂದಿಗೆ ಕೊವಿಡ್-19 ದೃಢಪಟ್ಟಿದೆ. ಇದರೊಂದಿಗೆ ಸಾವಿನ ಸಂಖ್ಯೆ 9ಕ್ಕೆ ಹಾಗೂ ಸೋಂಕಿತರ ಸಂಖ್ಯೆ 86ಕ್ಕೆ ಏರಿಕೆಯಾಗಿದೆ.
ಇಂದು ಧಾರಾವಿಯಲ್ಲಿ ಹೊಸದಾಗಿ 26 ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 86ಕ್ಕೆ ಏರಿಕೆಯಾಗಿದೆ ಎಂದು ಬಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ದೇಶದಲ್ಲೆ ಅತಿ ಹೆಚ್ಚು 3081 ಕೊರೋನ ಸೋಂಕು ಪ್ರಕರಣ ವರದಿಯಾಗಿದ್ದು, ಈವರೆಗೆ 187 ಜನರು ಮೃತಪಟ್ಟಿದ್ದಾರೆ.
ಇಂದು ಒಂದೇ ದಿನದಲ್ಲಿ ಮಹಾರಾಷ್ಟ್ರದಲ್ಲಿ 165 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3081ಕ್ಕೆರಿದೆ.
ದೇಶದ ಆರ್ಥಿಕ ರಾಜಧಾನಿ ಮುಂಬೈ ಈಗ ಕೊರೋನಾ ರಾಜಧಾನಿಯಾಗಿದ್ದು, ಮುಂಬೈ ಮಹಾನಗರಿಯೊಂದರಲ್ಲೇ ಇಂದು 107 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿವೆ. ಪುಣೆಯಲ್ಲಿ 19, ಥಾಣೆಯಲ್ಲಿ 13 ಮತ್ತು ನಾಗಪುರದಲ್ಲಿ 11 ಪ್ರಕರಣಗಳು ವರದಿಯಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


