ಲಾಕ್‌ಡೌನ್: ಶುಲ್ಕ ಹೆಚ್ಚಳವನ್ನು ಮರುಪರಿಶೀಲಿಸುವಂತೆ ಖಾಸಗಿ ಶಾಲೆಗಳಿಗೆ ಕೇಂದ್ರ ಒತ್ತಾಯ
ಲಾಕ್‌ಡೌನ್ ಸಮಯದಲ್ಲಿ ಖಾಸಗಿ ಶಾಲೆಗಳು ವಾರ್ಷಿಕ ಶುಲ್ಕ ಹೆಚ್ಚಳ ಮತ್ತು ತ್ರೈಮಾಸಿಕ ಶುಲ್ಕವನ್ನು ಸಂಗ್ರಹಿಸುವ ನಿರ್ಧಾರಗಳನ್ನು ಮರುಪರಿಶೀಲಿಸುವಂತೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಲ್ 'ನಿಶಾಂಕ್' ಕೇಳಿದ್ದಾರೆ.

ನವದೆಹಲಿ: ಲಾಕ್‌ಡೌನ್ ಸಮಯದಲ್ಲಿ ಖಾಸಗಿ ಶಾಲೆಗಳು ವಾರ್ಷಿಕ ಶುಲ್ಕ ಹೆಚ್ಚಳ ಮತ್ತು ತ್ರೈಮಾಸಿಕ ಶುಲ್ಕವನ್ನು ಸಂಗ್ರಹಿಸುವ ನಿರ್ಧಾರಗಳನ್ನು ಮರುಪರಿಶೀಲಿಸುವಂತೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಲ್ 'ನಿಶಾಂಕ್' ಕೇಳಿದ್ದಾರೆ.
"ವಾರ್ಷಿಕ ಶುಲ್ಕ ಹೆಚ್ಚಳದ ನಿರ್ಧಾರಗಳನ್ನು ಮರುಪರಿಶೀಲಿಸುವಂತೆ ನಾನು ಖಾಸಗಿ ಶಾಲೆಗಳನ್ನು ಒತ್ತಾಯಿಸುತ್ತೇನೆ, ಲಾಕ್ ಡೌನ್ ಸಮಯದಲ್ಲಿ ತ್ರೈಮಾಸಿಕ ಶುಲ್ಕವನ್ನು ಸಂಗ್ರಹಿಸದಂತೆ ನಾನು ಅವರಲ್ಲಿ ಕೇಳುತ್ತೇನೆ.
"ಪೋಷಕರು ಮತ್ತು ಶಾಲೆಗಳ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಶಿಕ್ಷಣ ಇಲಾಖೆಗಳು ಶುಲ್ಕ ಸಮಸ್ಯೆಯನ್ನು ಬಗೆಹರಿಸುತ್ತವೆ ಎಂದು ನಾನು ಭಾವಿಸುತ್ತೇನೆ.
"ಕೆಲವು ರಾಜ್ಯಗಳು ಲಾಕ್ ಡೌನ್ ಸಮಯದಲ್ಲಿ ಶಾಲಾ ಶುಲ್ಕ-ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಲು ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಂಡಿವೆ, ಇತರೆ ರಾಜ್ಯಗಳು ಸಹ ಇದನ್ನು ಪರಿಗಣಿಸುತ್ತವೆೆ ಎಂದು ಭಾವಿಸುತ್ತೇವೆ" ಎಂದು ನಿಶಾಂಕ್ ಹಿಂದಿಯಲ್ಲಿ ಮಾಡಿರುವ ಸರಣಿ ಟ್ವೀಟ್ ನಲ್ಲಿ ಹೇಳಿದ್ದಾ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


